BN Manjunatha Reddy retweeted
We have marched to PM Modi’s house to demand answers from him for the brutalities against young students yesterday.
The Government doesn’t want to take any accountability or does it want to have a debate on it in Parliament.
PM and HM must resign for destroying the future of India’s youth.
RT @RLR_BTM: Mr. @TVMohandasPai, Our BMTC MD is enough to handle a face-to-face debate with you on any platform.
Kindly come and discuss t…
This quoted post is unavailable.
BN Manjunatha Reddy retweeted
ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಸಂದರ್ಶನವೊಂದರಲ್ಲಿ, ಬೆಂಗಳೂರಿನ ಸಂಚಾರ ದಟ್ಟಣೆಗೆ ಸುರಂಗ ರಸ್ತೆಯೇ ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯ ಬಿಜೆಪಿ ನಾಯಕರು ಕೇವಲ ರಾಜಕೀಯ ಪ್ರೇರಿತರಾಗಿ ಈಗ ಈ ಯೋಜನೆಯನ್ನು ವಿರೋಧಿಸುವ ಬದಲು ಪರ್ಯಾಯ ಸ್ಥಳವನ್ನು ಅವರೇ ಸೂಚಿಸಬಹುದಲ್ಲವೇ??
#TunnelRoad #Bengaluru #RamalingaReddy
RT @RLR_BTM: ಬಿ.ಜೆ.ಪಿ ಅವರು ಇತರರಿಗೆ ಹೇಳೋದು ವೇದಾಂತ - ಮಾಡೋದು ಅನಾಚಾರ!
ವಿಧಾನಪರಿಷತ್ ಸದಸ್ಯರಾದ ಶ್ರೀ ರವಿಕುಮಾರ್ ಅವರು ಕಲಬುರಗಿ ಜಿಲ್ಲಾಧಿಕಾರಿಗಳ ಕುರಿ…
ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರೊಂದಿಗೆ ಸಿಲ್ಕ ಬೋರ್ಡ್ ಜಂಕ್ಷನ್‌ಗೆ ಭೇಟಿ ನೀಡಿ ಇತ್ತೀಚಿನ ಭಾರಿ ಮಳೆಯ ಪರಿಣಾಮವಾಗಿ ಉಂಟಾದ ಪ್ರವಾಹ ಸಮಸ್ಯೆ ಮತ್ತು ಸಾರ್ವಜನಿಕರು ಅನುಭವಿಸುತ್ತಿರುವ ತೊಂದರೆಗಳನ್ನು ಪರಿಶೀಲಿಸಲಾಯಿತು.
109
ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹದ ಸ್ಥಿತಿಯನ್ನು ಇಂದು ಪರಿಶೀಲಿಸಿ ಮಾಧ್ಯಮ ಮಿತ್ರರ ಪ್ರಶ್ನೆಗಳಿಗೆ ಉತ್ತರಿಸಿದೆ.
#Bengaluru #SilkBoard #Floods #BBMP #BMRCL
136
BN Manjunatha Reddy retweeted
"ಕೇಂದ್ರ ಗೃಹ ಸಚಿವರಾದ @AmitShah ಅವರಿಗೊಂದು ಬಹಿರಂಗ ಪತ್ರ"
ಸನ್ಮಾನ್ಯ ಅಮಿತ್ ಶಾ ಅವರೇ,
ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾಗಿ ಧೈರ್ಯದಿಂದ ದೇಶದ ಮುಂದೆ ತೆರೆದಿಟ್ಟದ್ದಕ್ಕಾಗಿ ಮತ್ತು ಕೊನೆಗೂ ನಿಮ್ಮ ಜೀವಮಾನದಲ್ಲಿ ಒಂದು ಸತ್ಯವನ್ನಾದರೂ ಹೇಳಿದ್ದಕ್ಕೆ ನಿಮ್ಮನ್ನು ಅಭಿನಂದಿಸುತ್ತೇನೆ. ನಿಮ್ಮ ಮಾತಿನಿಂದ ನಮಗೆ ಆಶ್ಚರ್ಯವಾಗಿಲ್ಲ, ನಮಗೆ ಇದು ಗೊತ್ತಿತ್ತು. ಸಂಸತ್ ನಲ್ಲಿ (18-12-2024) ಆಡಿದ ನಿಮ್ಮ ಮಾತಿನಿಂದ ಇಡೀ ದೇಶಕ್ಕೆ ನಿಮ್ಮ ಅಂತರಂಗದ ಅರಿವಾಗಿದೆ.. ಬಾಬಾಸಾಹೇಬ್ ಅವರು ಕೊಟ್ಟ ಸಂವಿಧಾನದಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿರುವ ಸಂಸತ್ ನಲ್ಲಿ ನಿಂತು ಅವರ ಸ್ಮರಣೆಯನ್ನು ವ್ಯಸನ ಎಂದು ತುಚ್ಛೀಕರಿಸುವ ನಿಮ್ಮ ಧಾಷ್ಟ್ರಕ್ಕೆ ಶಹಭಾಸ್ ಅನ್ನಲೇಬೇಕು..
ಅಮಿತ್ ಶಹಾ ಅವರೇ, ‘’ಬಾಬಾಸಾಹೇಬರ ಬಗ್ಗೆ ತಮಗೆ ಅಪಾರ ಅಭಿಮಾನ ಇದೆ, ಗೌರವ ಇದೆ, ನನ್ನ ಮಾತುಗಳನ್ನು ತಿರುಚಲಾಗಿದೆ’’ ಎಂದೆಲ್ಲ ಸ್ಪಷ್ಟೀಕರಣ ಕೊಟ್ಟು ಆತ್ಮವಂಚನೆ ಮಾಡಿಕೊಳ್ಳಬೇಡಿ. ಅದನ್ನು ಸಮರ್ಥಿಸಿಕೊಂಡು ದೇಶವನ್ನು ಎದುರಿಸಿ.
ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ. ನಮ್ಮ ಉಸಿರು ಇರುವವರೆಗೆ, ಈ ಭೂಮಿಯಲ್ಲಿ ಸೂರ್ಯ-ಚಂದ್ರ ಇರುವವರೆಗೆ ಅಂಬೇಡ್ಕರ್ ಸ್ಮರಣೆ ಇರಲಿದೆ. ನೀವು ತುಚ್ಛೀಕರಿಸಿದಷ್ಟೂ ಪುಟಿದು ಪುಟಿದು ಮೇಲೆದ್ದು ಬಂದು ಅವರು ನಮ್ಮ ಮುನ್ನಡೆಯ ಹಾದಿಗೆ ಬೆಳಕಾಗುತ್ತಾರೆ. ನಿಮ್ಮ ದುರಹಂಕಾರದ ಮಾತಿಗೆ ನಿಮ್ಮ ಬೆನ್ನಹಿಂದಿರುವ ಚೇಲಾಗಳು ಮೇಜುಕುಟ್ಟಿ ಸಂಭ್ರಮಿಸಿರಬಹುದು. ಆದರೆ ಅಂಬೇಡ್ಕರ್ ಅವರಿಂದಾಗಿ ಸಮಾನತೆ ಮತ್ತು ಘನತೆಯ ಬದುಕನ್ನು ಪಡೆದಿರುವ ದೇಶದ ಕೋಟ್ಯಂತರ ಜನ ನಿಮಗೆ ಛೀಮಾರಿ ಹಾಕುತ್ತಿದ್ದಾರೆ ಎನ್ನುವುದು ತಿಳಿದಿರಲಿ.
ಅಂಬೇಡ್ಕರ್ ಎಂಬ ಮನುಷ್ಯ ಈ ಭೂಮಿಯಲ್ಲಿ ಹುಟ್ಟದೆ ಇರುತ್ತಿದ್ದರೆ, ನನಗೆ ಮುಖ್ಯಮಂತ್ರಿಯಾಗುವ ಅವಕಾಶವೇ ಬರುತ್ತಿರಲಿಲ್ಲ, ನಾನು ಊರಲ್ಲಿ ದನ-ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು.. ನಮ್ಮ ಪಕ್ಷದ ಹಿರಿಯ ನಾಯಕರಾದ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆಯವರು ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಗಳನ್ನು ಪಡೆದು ಎಐಸಿಸಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿರಲಿಲ್ಲ, ಕಲಬುರ್ಗಿಯ ಯಾವುದಾದರೂ ಕಾರ್ಖಾನೆಯಲ್ಲಿ ಕಾರ್ಮಿಕರಾಗಿರುತ್ತಿದ್ದರು. ಈ ವಾಸ್ತವ ಸದಾ ನಮ್ಮ ನೆನಪಲ್ಲಿರುತ್ತದೆ. ನೀವು ಹೇಳುವ ವ್ಯಸನ ನಮ್ಮ ಪಾಲಿನ ಅಂಬೇಡ್ಕರ್ ಸ್ಮರಣೆ, ನಮ್ಮನ್ನೆಲ್ಲ ಇಲ್ಲಿಗೆ ತಂದು ನಿಲ್ಲಿಸಿ ನಮಗೆ ಸ್ಥಾನಮಾನ, ಗೌರವ ಮತ್ತು ಜನರ ಸೇವೆ ಮಾಡುವ ಅವಕಾಶವನ್ನು ಕೊಟ್ಟಿದೆ ಎನ್ನುವುದನ್ನು ನಾವು ಮರೆತಿಲ್ಲ.
ನಾನು ಮಾತ್ರ ಅಲ್ಲ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಕೊಟ್ಟಿರುವ ಸಂವಿಧಾನ ಇಲ್ಲದೆ ಇರುತ್ತಿದ್ದರೆ ನೀವು ಕೂಡಾ ಗೃಹಸಚಿವರಾಗಿ ಬದುಕು ಕೊಟ್ಟ ಮಹಾತ್ಮನನ್ನೇ ತುಚ್ಛೀಕರಿಸುವ ಅವಕಾಶ ನಿಮಗೆ ಸಿಗುತ್ತಿರಲಿಲ್ಲ. ನೀವು ನಿಮ್ಮೂರಿನಲ್ಲಿ ಎಲ್ಲಾದರೂ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗುತ್ತಿತ್ತು, ದೇಶದ ಪ್ರಧಾನಿ ಮತ್ತು ನಿಮ್ಮ ಸಹದ್ಯೋಗಿ ನರೇಂದ್ರ ಮೋದಿ ಅವರು ಕೂಡಾ ರೈಲ್ವೇ ಸ್ಟೇಷನ್ ನಲ್ಲಿ ಚಹಾ ಮಾರಿಕೊಂಡೇ ಇರಬೇಕಾಗಿತ್ತೋ ಏನೋ? ಅವರಿಗೂ ಪ್ರಧಾನಿಯಾಗುವ ಅವಕಾಶವೇ ಸಿಗುತ್ತಿರಲಿಲ್ಲ. ಇದನ್ನು ಪ್ರಧಾನಿಯವರೂ ಒಪ್ಪಿಕೊಳ‍್ಳಬಹುದು ಎಂದು ನಂಬಿದ್ದೇನೆ, ನೀವೂ ಒಪ್ಪಿಕೊಂಡು ಬಿಡಿ.
ಅಮಿತ ಶಾ ಅವರೇ, ಇತಿಹಾಸವನ್ನು ಓದಿರುವ ನಮ್ಮಂತಹವರಿಗೆ ನಿಮ್ಮೊಳಗಿನ ಅಂಬೇಡ್ಕರ್ ದ್ವೇಷ ಹೊಸದಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಬರೆದಿರುವ ದೇಶದ ಸಂವಿಧಾನವನ್ನು ಅವರು ಬದುಕಿರುವಾಗಲೇ ನಿಮ್ಮ ಮಾತೃಸಂಸ್ಥೆಯಾದ ಆರ್ ಎಸ್ ಎಸ್ ಯಾಕೆ ತಿರಸ್ಕರಿಸಿತ್ತು? ಆರ್ ಎಸ್ ಎಸ್ ನಾಯಕರಾಗಿದ್ದ ಹೆಡಗೆವಾರ್, ಗೋಲ್ವಾಲ್ಕರ್ ಮತ್ತು ಸಾವರ್ಕರ್ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆಗಳೇನು ಎನ್ನುವ ವಿವರಗಳೆಲ್ಲ ಇತಿಹಾಸದ ಪುಟಗಳಲ್ಲಿ ಇವೆ. ನಿಮ್ಮ ಸುಳ್ಳುಗಳು ಮತ್ತು ಆತ್ಮವಂಚನೆಯ ನಡವಳಿಕೆಗಳಿಂದ ಅದನ್ನು ಮರೆಮಾಚಬಹುದು, ಆದರೆ ಅಳಿಸಿಹಾಕಲಾಗುವುದಿಲ್ಲ ಎನ್ನುವುದು ನೆನಪಿರಲಿ. ಆ ಅಭಿಪ್ರಾಯವನ್ನೇ ನೀವು ಸಂಸತ್ ನಲ್ಲಿ ಆಡಿದ್ದೀರಿ.
ನಿಮ್ಮ ಮಾತಿನ ಧಾಟಿಯಲ್ಲಿಯೇ ಪ್ರತಿಕ್ರಿಯಿಸುತ್ತೇನೆ. ನಿಮ್ಮ ಪಕ್ಷ ಮತ್ತು ಅದರ ಹಿಂದಿರುವ ಪರಿವಾರಕ್ಕೆ ಇತ್ತೀಚೆಗೆ ಮೋದಿ…ಮೋದಿ.. ಮೋದಿ ಎಂದು ಹೇಳುವುದು ಒಂದು ವ್ಯಸನ ಆಗಿದೆ. ಮೋದಿಯವರ ಬದಲಿಗೆ ಅಷ್ಟು ಬಾರಿ ದೇವರ ನಾಮ ಸ್ಮರಣೆ ಮಾಡಿದ್ದರೆ ಏಳು ಜನ್ಮದಲ್ಲಿ ಮಾತ್ರ ಅಲ್ಲ, ನೂರು ಜನ್ಮದಲ್ಲಿಯೂ ನಿಮಗೆ ಸ್ವರ್ಗವೇ ಸಿಗುತ್ತಿತ್ತು, ಕೇವಲ ಅಧಿಕಾರದಲ್ಲಿ ಉಳಿಯಲಿಕ್ಕಾಗಿ ಮಾಡಿರುವ ಪಾಪಕೃತ್ಯಗಳಿಗೆ ಕ್ಷಮೆಯೂ ಸಿಗುತ್ತಿತ್ತು.
ವಿಶ್ವಾಸಪೂರ್ವಕವಾಗಿ....
ಇಂತೀ..
ಸಿದ್ದರಾಮಯ್ಯ
ಮಾಜಿ ಸಚಿವರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಘನತೆಯಿಂದ ನಡೆದುಕೊಳ್ಳಬೇಕಾದ C T Ravi ಅವರು ಮಹಿಳಾ ಸಚಿವರ ವಿರುದ್ಧ ಸದನದಲ್ಲೇ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. ಇದನ್ನು ನಾವು ಖಂಡಿಸಿದ್ದೇವೆ. ಸಿ.ಟಿ ರವಿ ಅವರನ್ನು ವಿಧಾನಪರಿಷತ್ ಸ್ಥಾನದಿಂದ ಕೂಡಲೇ ಪದಚ್ಯುತ ಗೊಳಿಸಬೇಕು.
@KarnatakaPMC @INCKarnataka @INCIndia @IYCKarnataka
46
BN Manjunatha Reddy retweeted
ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಸದನದಲ್ಲಿ ಇಂದು ಆಡಳಿತ ಪಕ್ಷದ ಸದಸ್ಯರ ಆಸನಗಳ ಎದುರು ಅಂಬೇಡ್ಕರರ ಭಾವಚಿತ್ರವಿಟ್ಟು ಪ್ರತಿಭಟನೆ ನಡೆಸಲಾಯಿತು.
BN Manjunatha Reddy retweeted
The Treasury Benches in Karnataka Assembly is chanting Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar, Ambedkar.
@AmitShah & @BJP4India, do you have a problem with this fashion?
BN Manjunatha Reddy retweeted
ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ 2024-25ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಉನ್ನತ ಮಟ್ಟದ ಆಯ್ಕೆ ಸಮಿತಿ ಸಭೆಯ ಕ್ಷಣಗಳು.
BN Manjunatha Reddy retweeted
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತರಾತುರಿಯಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದರ ಹಿಂದೆ ಕೇಂದ್ರ ಹಾಗೂ ಬಿಜೆಪಿ ನಾಯಕರ ಒತ್ತಡ ಇದ್ದು, ಅವರು ಕುಣಿಸಿದಂತೆ ರಾಜ್ಯಪಾಲರು ಕುಣಿಯುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದ್ದು, ರಾಜ್ಯಪಾಲರ ಸ್ಥಾನಕ್ಕೆ ಇದು ಶೋಭೆ ತರುವುದಿಲ್ಲ.
◘ ಎಚ್.ಡಿ ಕುಮಾರಸ್ವಾಮಿಯವರ ಗಣಿ ಹಗರಣದ ತನಿಖೆಗೆ ಲೋಕಾಯುಕ್ತ ಸಂಸ್ಥೆಯೇ ಅನುಮತಿ ಕೇಳಿದ್ದರೂ ರಾಜ್ಯಪಾಲರು ಕಳೆದ 10 ತಿಂಗಳಿಂದ ಕಡತವನ್ನು ಮೂಲೆಗೆ ತಳ್ಳಿ ಕೂತಿದ್ದಾರೆ.
◘ ಶಶಿಕಲಾ ಜೊಲ್ಲೆಯ ಮೊಟ್ಟೆ ಹಗರಣದ ವಿರುದ್ಧದ ತನಿಖೆಗೆ ಅನುಮತಿ ಕೋರಿದ ಕಡತವನ್ನು ಸಹ ಸುಮಾರು 2 ವರ್ಷಗಳಿಂದ ರಾಜ್ಯಪಾಲರು ಬಾಕಿ ಉಳಿಸಿಕೊಂಡಿದ್ದಾರೆ.
◘ ಮುರುಗೇಶ್ ನಿರಾಣಿ ಮಂತ್ರಿಯಾಗಿದ್ದಾಗ ಬೃಹತ್ ಕೈಗಾರಿಕೆ ಇಲಾಖೆ ವ್ಯಾಪ್ತಿಯಡಿ ಬರುವ ಮಾರ್ಕೆಟಿಂಗ್, ಜಾಹೀರಾತು ಮತ್ತು ಪ್ರಚಾರ ಸಂಸ್ಥೆಯಲ್ಲಿ 2011-15ರ ನಡುವೆ ನಡೆದ ಅಕ್ರಮ ನೇಮಕಾತಿಯ ತನಿಖೆಗೆ ಅನುಮತಿ ಕೋರಿರುವ ಕಡತ ನಿದ್ರಾವಸ್ಥೆಯಲ್ಲಿದೆ.
◘ ಜನಾರ್ಧನ್ ರೆಡ್ಡಿಯ ಗಣಿ ಹಗರಣದ ಕಡತ ರಾಜಭವನದಲ್ಲಿ ಧೂಳು ಹಿಡಿದಿದೆ.
ಬಿಜೆಪಿ ಮತ್ತು ಮಿತ್ರಪಕ್ಷದ ಬಗೆದಷ್ಟು ಲೆಕ್ಕ ಹಾಕದಷ್ಟು ಹಗರಣಗಳ ತನಿಖೆಗೆ ಅನುಮತಿ ಕೋರಿರುವ ಕಡತಗಳು ರಾಜಭವನದಲ್ಲಿ ವರ್ಷಗಳಿಂದ ಇದ್ದು, ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ರಾಜ್ಯಪಾಲರು ಸಿದ್ದರಾಮಯ್ಯ ನವರ ವಿಚಾರದಲ್ಲಿ ಮಾತ್ರ ತಮ್ಮ ಮಂತ್ರದಂಡವನ್ನು ಉಪಯೋಗಿಸಿ ಹೇಗಾದರೂ ಮಾಡಿ ಈ ಜನಪರ ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಬೇಕೆಂದು ಹೊರಟಿರುವುದು ಕಾನೂನು ಬಾಹಿರವಾಗಿದ್ದು, ಇದು ನಮ್ಮ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ನಾಶ ಮಾಡುವ ಪ್ರಯತ್ನವಾಗಿದೆ.
#RamalingaReddy #Siddaramaiah #Karnataka #MUDA #Mysuru #RajBhavan
@INCKarnataka @siddaramaiah @JanataDal_S @hd_kumaraswamy
BN Manjunatha Reddy retweeted
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಗೂರಿನಲ್ಲಿ ಆಯೋಜಿಸಿದ ಆರೋಗ್ಯ ಶಿಬಿರದಲ್ಲಿ ವಿಧಾನ ಪರಿಷತ್ ಸದಸ್ಯರಾದ @Ramojigowda , ವಿಧಾನಸಭಾ ಅಭ್ಯರ್ಥಿಯಾಗಿದ್ದ @rkramesh_inc , ಮಾ ಮಾಜಿ ಮೇಯರ್ @BNMREDDY , ಹಾಗೂ ಆಯೋಜಕ ಮಾಜಿ ಬಿಬಿಎಂಪಿ ಸದಸ್ಯರ ಆಂಜನಪ್ಪ ರವರು, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
#AnjinappaBirthday
BN Manjunatha Reddy retweeted
ಕೊರಿಯಾ ಪ್ರವಾಸದ ಗಳಿಕೆ - ರಾಜ್ಯಕ್ಕೆ ಬಂತು ಹೆಚ್ಚಿನ ಹೂಡಿಕೆ
2025ರಲ್ಲಿ ಬೆಂಗಳೂರಿನಲ್ಲಿ KEB ಹಾನಾ ಬ್ಯಾಂಕ್ ಶಾಖೆ ಆರಂಭ
ಕ್ರಾಫ್ಟನ್ ಗೇಮಿಂಗ್ ಕಂಪೆನಿ; ರೂ. 1,245 ಕೋಟಿ ಹೂಡಿಕೆಗೆ ಆಸಕ್ತಿ
ಆಟೋ ಬಿಡಿಭಾಗಗಳ ತಯಾರಿಕಾ ಘಟಕ ಸ್ಥಾಪನೆಗೆ HYAC ಕಂಪೆನಿ ಒಲವು
ಸಿಯೋಲ್ ಮೇಯರ್ ಅವರೊಂದಿಗೆ ಹೂಡಿಕೆಗಿರುವ ಅವಕಾಶಗಳ ಕುರಿತು ಚರ್ಚೆ
ಜಿಯೊಂಗಿ ಉಪ ರಾಜ್ಯಪಾಲರೊಂದಿಗೆ KHIRCity ಕುರಿತು ಮಹತ್ವದ ಚರ್ಚೆ
ರಾಜ್ಯದಲ್ಲಿ ಗೋ ಪಿಜ್ಜಾ ಕಾರ್ಖಾನೆ ವಿಸ್ತರಣೆಗೆ ಸರ್ಕಾರದ ಬೆಂಬಲ
ಹೂಡಿಕೆ ಹೆಚ್ಚಳ; ಉದ್ಯೋಗಗಳ ಸೃಷ್ಟಿ ವಿಪುಲ
ಜಾಗತಿಕ ಮಟ್ಟದಲ್ಲಿ ರಾಜ್ಯ ಕೈಗಾರಿಕಾ ವಲಯ ಬಲಗೊಳ್ಳುತ್ತಾ ಮುನ್ನಡೆದಿದೆ...
#InvestKarnataka2025 #GIM2025 #ReimaginingGrowth #Karnataka #KarnatakaDelegationAtSouthKorea
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ನಮ್ಮೆಲ್ಲರ ನೆಚ್ಚಿನ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು.
ಸೈದ್ಧಾಂತಿಕ ಬದ್ಧತೆ, ಮತ್ತು ಜನಪರ ಕಾಳಜಿಯ ರಾಹುಲ್ ಗಾಂಧಿ ರವರು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಅತ್ಯಂತ ಸಮರ್ಥವಾಗಿ ಕಾರ್ಯ ನಿರ್ವಹಿಸಲಿದ್ದಾರೆ.
#RahulGandhi #LeaderOfOpposition
61
Happy birthday to the Popular leader, KPCC Executive President and Minister of Transport and Mujrai Department Shri Ramalinga Reddy. May you be blessed with a life filled with happiness, abundance and good health always.
#Ramalingareddy #RLR
1
46
ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗು ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
ಭಗವಂತ ತಮಗೆ ಆಯುಷ್ಯ, ಆರೋಗ್ಯ ನೀಡಲಿ ಹಾಗು ತಮ್ಮಿಂದ ಜನಸೇವೆ ನಿರಂತರವಾಗಿ ನಡೆಯಲಿ ಎಂದು ಶುಭ ಕೋರುತ್ತೇನೆ
#RamalingaReddy #RLR
1
2
55
BN Manjunatha Reddy retweeted
Deeply saddened to hear about the demise of five trekkers from our state due to adverse weather conditions in Sahastra Tal, Uttarakhand. I pray for the peace of the departed souls.
Eleven trekkers have already been safely rescued through ongoing operations, but several more are still in need of rescue. The harsh weather is severely hampering the rescue efforts, yet our government is making every possible effort to bring everyone back safely.
I have directed Minister Shri Krishna Byre Gowda to proceed to Dehradun today to oversee the rescue operations. Both local and army helicopters will be used to ensure the safe return of our people.
ಕೆಪಿಸಿಸಿ ಅಧ್ಯಕ್ಷರು ಹಾಗು ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
ಭಗವಂತ ತಮಗೆ ಉತ್ತಮ ಆರೋಗ್ಯ, ಸುಖ, ಸಂತೋಷವನ್ನು ನೀಡಲಿ ಎಂದು ಹಾರೈಸುತ್ತೇನೆ.
#DKShivakumar #KPCC #INC #INCKarnataka
3
87































