This is the official 'X' account of Superintendent of Police, Mandya District.

Joined October 2015
ಈ ದಿನ ಮಾನ್ಯ ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ ಎಲ್.ನಾಗೇಶ್ ರವರು ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ವಾರ್ಷಿಕ ಪರಿಶೀಲನೆ ನಡೆಸಿದರು, ಈ ಸಂದರ್ಭದಲ್ಲಿ ಠಾಣೆಯ ದಾಖಲೆಗಳು, ಪ್ರಕರಣಗಳಿಗೆ ಸಂಬಂಧಿಸಿದ ಸ್ವತ್ತುಗಳು, ವಾಹನಗಳು, ಶಸ್ತ್ರಾಸ್ತ್ರಗಳು ಹಾಗೂ ಠಾಣೆಯ ವಿವಿಧ ವಿಭಾಗಗಳ ಪರಿಶೀಲನೆ ನಡೆಸಿ,ಠಾಣಾ ಸಿಬ್ಬಂದಿಗಳ ಕುಂದು ಕೊರತೆಗಳನ್ನು ಆಲಿಸಿ
1
213
ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
18
ಮಂಡ್ಯ ನಗರದ ಕಲಾ ಮಂದಿರದಲ್ಲಿ ಇಂದು ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾರಾಣಿ ವಿ.ಜೆ., ಐಪಿಎಸ್ ರವರು, ಮಾನ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಗಣ್ಯರು, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು,
1
112
ಈ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಆದರ್ಶಗಳು, ಮೌಲ್ಯಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಯಿತು.
7
ಈ ದಿನ ಜಿಲ್ಲಾಧಿಕಾರಿಗಳ ಕಛೇರಿ ಆವರಣದಿಂದ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಕಾರ್ಯಕ್ರಮದ ಮೆರವಣಿಗೆಗೆ ನಗಾರಿ ಬಾರಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,ಮಾನ್ಯ ಜಿಲ್ಲಾ ಪಂಚಾಯತ್ ಸಿಇಓ ರವರು,
1
1
253
ವಿವಿಧ ಇಲಾಖೆಯ ಅಧಿಕಾರಿಗಳು, ಕಲಾ ತಂಡಗಳು ಹಾಗೂ ನಾಗರೀಕರು ಪಾಲ್ಗೊಂಡಿದ್ದರು.
20
ನಾಡಿನ ಸಮಸ್ತ ಜನತೆಗೆ ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯ ಹಾರ್ದಿಕ ಶುಭಾಶಯಗಳು.
2
83
ಸೈಬರ್ ವಂಚನೆಯಾದರೆ ತಡ ಮಾಡಬೇಡಿ! 1930ಗೆ ಕರೆ ಮಾಡಿ ದೂರು ದಾಖಲಿಸಿ, ತಕ್ಷಣದ ದೂರು — ನಿಮ್ಮ ಹಣದ ರಕ್ಷಣೆಗೆ ಮೊದಲ ಹೆಜ್ಜೆ!
153
ಈ ದಿನ ಅಕ್ಕ ಪಡೆಯ ಸಿಬ್ಬಂದಿಗಳು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ನಡೆಸಿ ಮಹಿಳೆಯರಿಗೆ ಸರಗಳ್ಳತನ, ಭಿಕ್ಷಾಟನೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಅಕ್ಕ ಪಡೆ ಸಹಾಯವಾಣಿ ಸಂಖ್ಯೆಗಳ ಬಗ್ಗೆ ಅರಿವು ಮೂಡಿಸಿರುತ್ತಾರೆ.
1
164
ಈ ದಿನ ನಾಗಮಂಗಲ ಟೌನ್ ಪೊಲೀಸ್ ಠಾಣಾ ವತಿಯಿಂದ ನಶಾ ಮುಕ್ತ ಯುವ 2026-27 ಕಾರ್ಯಕ್ರಮದ ಪ್ರಯುಕ್ತ ದೇವಲಾಪುರ ಹ್ಯಾಂಡ್ ಪೋಸ್ಟ್ ಬಳಿಯ ಐ.ಟಿ.ಐ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮುಕ್ತ ಕರ್ನಾಟಕ ಹಾಗೂ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
243
ದಿನಾಂಕ: 23.10.2026 ರಂದು ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವುದು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆದ ಗಣಂಗೂರು ಟೋಲ್ ಬಂದ್ ಹಾಗೂ ಪ್ರತಿಭಟನೆಯ ಹಿನ್ನೆಲೆಯಲ್ಲಿ,ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ
1
1
179
ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಸೂಕ್ತ ಸಂಚಾರ ವ್ಯವಸ್ಥೆ ಕಲ್ಪಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವ ಕುರಿತು ಈ ದಿನ ಕನ್ನಡ ಪ್ರಭಾ ದಿನಪತ್ರಿಕೆಯಲ್ಲಿ ಪ್ರಕಟವಾದ ವರದಿ.
15
ಪೋಲಿಯೋ ವಿರುದ್ಧದ ಹೋರಾಟದಲ್ಲಿ ಪ್ರತಿಯೊಂದು ಮಗುವಿನ ಆರೋಗ್ಯವೂ ಅಮೂಲ್ಯ. ಲಸಿಕೆ ಹಾಕಿಸುವ ಮೂಲಕ ಮಕ್ಕಳನ್ನು ಪೋಲಿಯೋದಿಂದ ರಕ್ಷಿಸಿ, ಆರೋಗ್ಯವಂತ ಹಾಗೂ ಸುರಕ್ಷಿತ ಭವಿಷ್ಯವನ್ನು ನಿರ್ಮಿಸೋಣ, ನಾಡಿನ ಸಮಸ್ತ ಜನತೆಗೆ ವಿಶ್ವ ಪೋಲಿಯೋ ದಿನದ ಶುಭಾಶಯಗಳು.
95
ಶಾಂತಿ, ಭದ್ರತೆ, ಮಾನವ ಹಕ್ಕುಗಳು ಮತ್ತು ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಮೂಲಕ ವಿಶ್ವದಾದ್ಯಂತ ಶಾಂತಿ ಹಾಗೂ ಸೌಹಾರ್ದತೆಯನ್ನು ಸ್ಥಾಪಿಸುವಲ್ಲಿ ವಿಶ್ವ ಸಂಸ್ಥೆಯ ಪಾತ್ರ ಮಹತ್ವದ್ದಾಗಿದೆ, ನಾಡಿನ ಸಮಸ್ತ ಜನತೆಗೆ ವಿಶ್ವ ಸಂಸ್ಥೆ ದಿನದ ಶುಭಾಶಯಗಳು.
1
70
ಮಾದಕ ವ್ಯಸನ ಕ್ಷಣಿಕ ಸುಖ ನೀಡಬಹುದು, ಆದರೆ ಅದು ನಿಮ್ಮ ಆರೋಗ್ಯ, ಶಿಕ್ಷಣ, ಸಂಬಂಧಗಳು ಮತ್ತು ಭವಿಷ್ಯವನ್ನು ಕಸಿದುಕೊಳ್ಳಬಹುದು,ಮಾದಕ ವ್ಯಸನದಿಂದ ದೂರವಿರಿ, ಆರೋಗ್ಯಕರ ಬದುಕನ್ನು ಆಯ್ಕೆಮಾಡಿ.
145
ಅತಿಯಾದ ವೇಗ ಕ್ಷಣಿಕ ರೋಮಾಂಚನ ನೀಡಬಹುದು, ಆದರೆ ಅದರ ಪರಿಣಾಮ ಜೀವನಪೂರ್ತಿ ನೋವು ತರಬಹುದು. ನಿಯಮಿತ ವೇಗದಲ್ಲಿ ವಾಹನ ಚಲಾಯಿಸಿ, ಸುರಕ್ಷಿತವಾಗಿರಿ.
115
ಈ ದಿನ ಅಕ್ಕ ಪಡೆಯ ಸಿಬ್ಬಂದಿಗಳು ಮಂಡ್ಯ ನಗರದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಗಸ್ತು ನಡೆಸಿ ಮಹಿಳೆಯರಿಗೆ ಸರಗಳ್ಳತನ, ಭಿಕ್ಷಾಟನೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಅಕ್ಕ ಪಡೆ ಸಹಾಯವಾಣಿ ಸಂಖ್ಯೆಗಳ ಬಗ್ಗೆ ಅರಿವು ಮೂಡಿಸಿರುತ್ತಾರೆ.
163
ಈ ದಿನ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಗಣಂಗೂರು ಟೋಲ್‌ನಲ್ಲಿ ವಿವಿಧ ರೈತ ಸಂಘಟನೆಗಳು ವತಿಯಿಂದ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಹಾಗೂ ಟೋಲ್ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾರಾಣಿ ವಿ.ಜೆ., ಐಪಿಎಸ್
1
1
210
ರವರು ಸದರಿ ಸ್ಥಳಕ್ಕೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪ್ರತಿಭಟನೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರ ಕುರಿತು ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
31
ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
199