Basavaraj Rayareddi (@Rayaraddi_B) header
Basavaraj Rayareddi (@Rayaraddi_B) profile picture

Minister for Higher Education, Government of Karnataka • MLA,Yelburga Constituency

Joined August 2026
ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಸಶಕ್ತಗೊಳಿಸುವ ನಿಟ್ಟಿನಲ್ಲಿ, ನೂತನವಾಗಿ ನೇಮಕಗೊಂಡಿರುವ 222 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ನೇಮಕಾತಿ ಆದೇಶ ಪ್ರದಾನ ಮಾಡುವ "ಶೈಕ್ಷಣಿಕ ಸಾರಥ್ಯ" ಸಮಾರಂಭವನ್ನು ನಾಳೆ ಹಮ್ಮಿಕೊಳ್ಳಲಾಗಿದೆ.
1
37
ಬಿ.ಎಡ್ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಮಹತ್ವದ ಸುಧಾರಣೆ! 2026-27ನೇ ಸಾಲಿನಿಂದ ರಾಜ್ಯದಲ್ಲಿ ಬಿ.ಎಡ್ ಪ್ರವೇಶಾತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ನಡೆಸಲು ಸರ್ಕಾರದ ಮಹತ್ವದ ನಿರ್ಧಾರ. ​.
4
61
ಇಂದು ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ"ಯ ಅಧ್ಯಕ್ಷತೆ ವಹಿಸಿ, ಇಲಾಖಾವಾರು ಪ್ರಗತಿಯ ಕುರಿತು ಪರಿಶೀಲನೆ ನಡೆಸಲಾಯಿತು.
1
39
2022ರಿಂದ ನೆನೆಗುದಿಗೆ ಬಿದ್ದಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿನ ಕಾನೂನು ತೊಡಕುಗಳನ್ನು ನಿವಾರಿಸಿ, ಸಂಪೂರ್ಣ ಪಾರದರ್ಶಕವಾಗಿ ಮತ್ತು ಯಾವುದೇ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲದೆ ಅರ್ಹರನ್ನು ಆಯ್ಕೆ ಮಾಡಲಾಗಿದೆ
1
89
2022ರಿಂದ ನೆನೆಗುದಿಗೆ ಬಿದ್ದಿದ್ದ 310 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರ ನೇಮಕಾತಿಯಲ್ಲಿ ಕಾನೂನು ತೊಡಕು ನಿವಾರಿಸಿ, ಇಂದು ಮೊದಲ ಹಂತದಲ್ಲಿ 222 ಅರ್ಹರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಭ್ರಷ್ಟಾಚಾರ ರಹಿತ ಆಡಳಿತ ಮತ್ತು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಸರ್ಕಾರದ ದೃಢ ಸಂಕಲ್ಪ. .
61
ಸ್ವತಂತ್ರ ಭಾರತದ ಮೊಟ್ಟಮೊದಲ ಶಿಕ್ಷಣ ಸಚಿವ, ಶ್ರೇಷ್ಠ ಸ್ವಾತಂತ್ರ್ಯ ಸೇನಾನಿ ಹಾಗೂ ಭಾರತರತ್ನ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಸವಿನೆನಪಿನಲ್ಲಿ, ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ 'ರಾಷ್ಟ್ರೀಯ ಶಿಕ್ಷಣ ದಿನಾಚರಣೆ-2026' ಕಾರ್ಯಕ್ರಮದಲ್ಲಿ ಪಾಲ್ಗೊಂಡೆ.
1
60
ಕರ್ನಾಟಕದ ಭವಿಷ್ಯದ ಕಾರ್ಯಪಡೆಗೆ ನೂತನ ಆಶಾಕಿರಣ: 'ಬೆಂಗಳೂರು ಕೌಶಲ್ಯ ಶೃಂಗಸಭೆ–2026'ಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಶೃಂಗಸಭೆಗೆ ಜಪಾನ್ ದೇಶ ಸಹಭಾಗಿತ್ವವನ್ನು ನೀಡಿದೆ. ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ (SDEL), KSDC ಹಾಗೂ KSDA ಸಹಯೋಗದಲ್ಲಿ ಆಯೋಜಿಸಿರುವ ಈ ಬೃಹತ್ ಶೃಂಗಸಭೆಯು ನವೆಂಬರ್ 5ರವರೆಗೆ ಬೆಂಗಳೂರಿನ ಖಾಸಗಿ ಹೋಟೆಲ್‌ ನಲ್ಲಿ ನಡೆಯಲಿದೆ. 'ಮಾನವ ಸಂಪನ್ಮೂಲ 2030: ವಿಸ್ತರಣೆ, ವ್ಯವಸ್ಥೆಗಳು ಮತ್ತು ಸಮನ್ವಯ' ಎಂಬ ಧ್ಯೇಯದೊಂದಿಗೆ ಕೃತಕ ಬುದ್ಧಿಮತ್ತೆ (AI), ಹಸಿರು ಉದ್ಯೋಗಗಳು, ಜಾಗತಿಕ ಕೌಶಲ್ಯಗಳು ಮತ್ತು ಉದ್ಯೋಗಾವಕಾಶ ಹೆಚ್ಚಿಸುವ ಹೊಸ ಸಾಧ್ಯತೆಗಳು ಮತ್ತು ಕಾರ್ಯತಂತ್ರಗಳ ಕುರಿತು ಇಲ್ಲಿ ಚರ್ಚಿಸಲಾಗುತ್ತಿದೆ. ಈ ಶೃಂಗಸಭೆಯು ಉದ್ಯಮ ವಲಯದ ಅಗತ್ಯಗಳಿಗೆ ಅನುಗುಣವಾಗಿ ಯುವಜನರ ಕೌಶಲ್ಯಗಳನ್ನು ರೂಪಿಸುವುದರೊಂದಿಗೆ, ಕರ್ನಾಟಕವನ್ನು ಜಾಗತಿಕ ಕೌಶಲ್ಯಾಭಿವೃದ್ಧಿ ಕೇಂದ್ರವನ್ನಾಗಿ ಬೆಳೆಸುವ ನಿಟ್ಟಿನಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ. ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್, ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ, ಶ್ರೀ ಎಂ ಬಿ ಪಾಟೀಲ್, KSDC ಅಧ್ಯಕ್ಷರಾದ ಶ್ರೀಮತಿ ಕಾಂತಾನಾಯಕ್ ಸೇರಿದಂತೆ ಸರ್ಕಾರದ ಹಿರಿಯ ಗಣ್ಯರು ಹಾಗೂ ಉದ್ಯಮ ವಲಯದ ಪ್ರಮುಖರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
1
114
ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿರುವ ವಿಶ್ವೇಶ್ವರಯ್ಯ ಉನ್ನತ ತಂತ್ರಜ್ಞಾನ ಸಂಸ್ಥೆಗೆ ಭೇಟಿ ನೀಡಿ, ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ಪರಿಶೀಲನೆ ಮಾಡಲಾಯಿತು. ಜೊತೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇದರ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಮಾಡಿ, ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷರಾದ ಪ್ರೊ ಎಸ್ ಆರ್ ನಿರಂಜನ್, ವಿಟಿಯು ಕುಲಪತಿಗಳಾದ ಪ್ರೊ. ವಿದ್ಯಾಶಂಕರ ಹಾಗೂ ಸಂಸ್ಥೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
1
1
90
ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಡಿಜಿಟಲ್ ಸ್ಪರ್ಶ ರೋಟರಿ ಸಂಸ್ಥೆಯೊಂದಿಗೆ 'ಜ್ಞಾನ ಸೇತು' ಒಡಂಬಡಿಕೆ! ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಇಂದು ಉನ್ನತ ಶಿಕ್ಷಣ ಇಲಾಖೆ ಹಾಗೂ ರೋಟರಿ ಅಂತರಾಷ್ಟ್ರೀಯ ಸಂಸ್ಥೆ ನಡುವೆ ಮೂರು ವರ್ಷಗಳ 'ಜ್ಞಾನ ಸೇತು' ಯೋಜನೆಗೆ (MoU) ಸಹಿ ಹಾಕಲಾಯಿತು. ಬೆಂಗಳೂರಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ​ಈ ಒಡಂಬಡಿಕೆಯ ಪ್ರಮುಖ ಅಂಶಗಳು: ಉಚಿತ ಲ್ಯಾಪ್‌ಟಾಪ್ ವಿತರಣೆ: ಮೊದಲ ಹಂತವಾಗಿ 250 ಲ್ಯಾಪ್‌ಟಾಪ್‌ಗಳನ್ನು ಲೈಸೆನ್ಸ್ಡ್ ಸಾಫ್ಟ್‌ವೇರ್‌ನೊಂದಿಗೆ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಡಿಜಿಟಲ್ ಕಲಿಕಾ ಕೇಂದ್ರಗಳು: ಸರ್ಕಾರಿ ಕಾಲೇಜುಗಳಲ್ಲಿ ಕಂಪ್ಯೂಟರ್ ಲ್ಯಾಬ್ ಹಾಗೂ ಡಿಜಿಟಲ್ ಲರ್ನಿಂಗ್ ಸೆಂಟರ್ ಸ್ಥಾಪನೆ. ಬೃಹತ್ ಕೊಡುಗೆ: ಮೈಕ್ರೋಸಾಫ್ಟ್‌ನಿಂದ 500 ಹಾಗೂ ಕಾಗ್ನಿಸೆಂಟ್‌ನಿಂದ 1,000 ಡೆಸ್ಕ್‌ಟಾಪ್‌ಗಳನ್ನು ಶೀಘ್ರವೇ ವಿತರಿಸಲಾಗುವುದು. ಇದರ ಸಾಗಣೆ ಮತ್ತು ಸಾಫ್ಟ್‌ವೇರ್ ವೆಚ್ಚವನ್ನು ರೋಟರಿಯೇ ಭರಿಸಲಿದೆ. ಸರ್ವಾಂಗೀಣ ಅಭಿವೃದ್ಧಿ: ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ, ಇ-ತ್ಯಾಜ್ಯ ನಿರ್ವಹಣೆ, ತ್ಯಾಜ್ಯ ನೀರಿನ ಸಂಸ್ಕರಣೆಗೂ ರೋಟರಿ ಸಂಸ್ಥೆ ಸಹಕಾರ ನೀಡಲಿದೆ. ​ರಾಜ್ಯದ 550ಕ್ಕೂ ಹೆಚ್ಚು ಕಾಲೇಜುಗಳ ಸುಮಾರು 5 ಲಕ್ಷ ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣದ ಸೌಲಭ್ಯ ಒದಗಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಗೆ ಕೈಜೋಡಿಸಿದ ರೋಟರಿ ಸಂಸ್ಥೆಗೆ ತುಂಬು ಹೃದಯದ ಧನ್ಯವಾದಗಳು. ​ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ತುಳಸಿ ಮದ್ದಿನೇನಿ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಶ್ರೀ ಹೆಚ್. ಎನ್. ಗೋಪಾಲಕೃಷ್ಣ, ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೆ. ಹರೀಶ್ ಕುಮಾರ್, ರೋಟರಿ ಸಂಸ್ಥೆ/ಸ್ನೇಹಸೇತು ಉಪಾಧ್ಯಕ್ಷರಾದ ಶ್ರೀ ಜಯರಾಮನ್ ಎಸ್. ಹಾಗೂ ರೋಟರಿ ಪದಾಧಿಕಾರಿಗಳಾದ ಶ್ರೀ ಸುರೇಶ್ ಹರಿ, ಶ್ರೀ ಅನಿಲ್ ಗುಪ್ತ, ಶ್ರೀ ಕೆ. ಪಿ. ನಾಗೇಶ್ ಸೇರಿದಂತೆ ಇಲಾಖೆಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
5
146
Basavaraj Rayareddi retweeted
Thank you for turning out in such record numbers to raise your voice against Vote Chori. This groundswell ensures democracy will prevail, truth will prevail. INDIA will prevail!
2,572
13,105
433
50,231
1,021,058
ದಯಾನಂದ ಸಾಗರ್ ಯುನಿವರ್ಸಿಟಿಯ 10ನೇ ಘಟಿಕೋತ್ಸವದಲ್ಲಿ ಭಾಗಿಯಾಗಿದ ಕ್ಷಣ!
3
86
ಬೆಂಗಳೂರಿನ ಹಾರೋಹಳ್ಳಿಯಲ್ಲಿರುವ ದಯಾನಂದ ಸಾಗರ ವಿಶ್ವವಿದ್ಯಾಲಯದ 10 ನೇ ಘಟಿಕೋತ್ಸವದಲ್ಲಿ ಭಾಗವಹಿ, ಪದವಿ ಪ್ರದಾನ ಮಾಡಲಾಯಿತು. ನೂತನ ತಂತ್ರಜ್ಞಾನ, ಅದರಿಂದ ಎದುರಿಸಬೇಕಾದ ಸವಾಲುಗಳು, ಉದ್ಯೋಗದಲ್ಲಿ ಎದುರಿಸಬೇಕಾದ ಸವಾಲುಗಳು ಸಾಕಷ್ಟಿದೆ. ವಿದ್ಯಾರ್ಥಿಗಳು ಸಂಶೋಧನೆಯತ್ತ ಹೆಚ್ಚಿನ ಒತ್ತು ನೀಡಬೇಕು. ಕೇವಲ ಉದ್ಯೋಗಿಯಾಗದೇ, ಉದ್ಯೋಗ ನೀಡುವಂತಾಗಬೇಕು. ಶಿಕ್ಷಣ ನೀಡುವಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಕಾರ್ಯಕ್ರಮದಲ್ಲಿ ರೋಪಾರ್ IIT ನಿರ್ದೇಶಕರಾದ ಪ್ರೊ. ರಾಜೀವ್ ಅಹುಜಾ, ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಶ್ರೀ ಹರ್ಷಬೀರಾ ಸಂಘಾ, ಡಾ. ಹೇಮಚಂದ್ರ ಸಾಗರ್, ಡಾ. ಪ್ರೇಮಚಂದ್ರ ಸಾಗರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
1
50
A memorable Mysuru Dasara! Deputy High Commissioner @harshisanghaMBE joined Dasara Celebrations in Mysuru. Grateful to @CMofKarnataka @DKShivakumar for the opportunity to celebrate Karnataka's rich cultural heritage.
3
1
10
1,269
ಲೋಕಭವನದಲ್ಲಿ ಕರ್ನಾಟಕದ ನೂತನ ರಾಜ್ಯಪಾಲರಾದ ಗೌರವಾನ್ವಿತ ಡಾ. ಸುಧಾ ಯಾದವ್ ಅವರನ್ನು ಭೇಟಿಯಾಗಿ ಶುಭಾಶಯ ಕೋರಲಾಯಿತು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಶ್ರೀಮತಿ ತುಳಸಿ ಮದ್ದಿನೇನಿ ಉಪಸ್ಥಿತರಿದ್ದರು.
68
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವಿವಿಧ ದೇಶಗಳ ರಾಯಭಾರಿಗಳು ಹಾಗೂ ಗಣ್ಯರನ್ನು ಇಂದು ಅತ್ಯಂತ ಹರ್ಷದಿಂದ ಸ್ವಾಗತಿಸಿದೆನು. ​ಯುರೋಪಿಯನ್ ಒಕ್ಕೂಟ, ಚೀನಾ, ಎಕ್ವೆಡಾರ್, ಮೊಜಾಂಬಿಕ್, ಬಲ್ಗೇರಿಯಾ, ಬ್ರಿಟನ್, ಡೆನ್ಮಾರ್ಕ್, ಇಸ್ರೇಲ್, ಅರ್ಮೇನಿಯಾ ಹಾಗೂ ಆಸ್ಟ್ರೇಲಿಯಾ ದೇಶಗಳ ರಾಯಭಾರಿಗಳು ಹಾಗೂ ಉನ್ನತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುವುದು ಅತ್ಯಂತ ಸಂತಸದ ಕ್ಷಣವಾಗಿತ್ತು. ​ಈ ಸಂದರ್ಭದಲ್ಲಿ ನಮ್ಮ ಕರ್ನಾಟಕದ ಶ್ರೀಮಂತ ಇತಿಹಾಸ, ಕಲೆ, ಆಚಾರ-ವಿಚಾರಗಳು, ಮೈಸೂರು ರಾಜಮನೆತನದ ಶ್ರೇಷ್ಠ ಪರಂಪರೆ ಹಾಗೂ ದಸರಾದ ಭವ್ಯತೆಯ ಬಗ್ಗೆ ಗಣ್ಯರಿಗೆ ಮಾಹಿತಿ ನೀಡಿದೆ. ವಿಶೇಷವಾಗಿ ನಾಡದೇವತೆ ಶ್ರೀ ಚಾಮುಂಡೇಶ್ವರಿಯ ಮಹಿಮೆ, ಜನರ ಭಕ್ತಿ-ಶ್ರದ್ಧೆ, ಅಂಬಾರಿಯ ಮಹತ್ವ ಹಾಗೂ ದಸರಾ ಆಚರಣೆಯ ವೈಶಿಷ್ಟ್ಯಗಳ ಕುರಿತು ವಿವರಿಸಿದಾಗ, ನಮ್ಮ ಸಂಸ್ಕೃತಿಯ ಬಗೆಗಿನ ಅವರ ಆಸಕ್ತಿ ಮತ್ತು ಮೆಚ್ಚುಗೆ ಕಂಡು ಹೆಮ್ಮೆಯೆನಿಸಿತು.
2
67
ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ವಿದೇಶಿ ಗಣ್ಯರು ಹಾಗೂ ವಿವಿಧ ದೇಶಗಳ ರಾಯಭಾರಿಗಳನ್ನು ಸ್ವಾಗತಿಸುವ ಶಿಷ್ಟಾಚಾರದ ಕುರಿತು ಇಂದು ವಿಧಾನಸೌಧದಲ್ಲಿ ಸಭೆ ನಡೆಸಿ, ವಿಸ್ತ್ರತವಾಗಿ ಚರ್ಚಿಸಲಾಯಿತು. ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಯನ್ನು ಅತ್ಯಂತ ವಿಜ್ರಂಭಣೆ ಹಾಗೂ ವ್ಯವಸ್ಥಿತವಾಗಿ ನಮ್ಮ ಸರ್ಕಾರ ನಡೆಸುತ್ತಿದೆ. ಅದರ ಭಾಗವಾಗಿ ಗಣ್ಯರ ಸ್ವಾಗತದಲ್ಲಿ ಸ್ವಲ್ಪವೂ ಲೋಪದೋಷಗಳು ಉಂಟಾಗದಂತೆ ಅಗತ್ಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಕಾರ್ಮಿಕ ಸಚಿವರಾದ ಶ್ರೀ ಸಂತೋಷ ಲಾಡ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
1
1
69
India's top ranked university is right here in #Karnataka, with the recent opening of @UNSW, a top-20 global university. A/g Consul General Steven met Karnataka’s new Education Minister @Rayaraddi_B to discuss how Australian education and research will create jobs of the future.
4
1
17
558
ಉನ್ನತ ಶಿಕ್ಷಣ ಸಚಿವನಾಗಿ ಅಧಿಕಾರ ವಹಿಸಿಕೊಂಡು 30 ದಿನದಲ್ಲಿ ಕೈಗೊಂಡ ಕಾರ್ಯಗಳು! #Basavarajrayaeddi #departmentofhigereducation
1
85
ವಿಧಾನಸೌಧದಲ್ಲಿ ಇಂದು, ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ವಿದೇಶಿ ಗಣ್ಯರು ಹಾಗೂ ವಿವಿಧ ದೇಶಗಳ ರಾಯಭಾರಿಗಳನ್ನು ಸ್ವಾಗತಿಸುವ ಶಿಷ್ಟಾಚಾರದ ಕುರಿತು ಸಭೆ ನಡೆಸಿ ಚರ್ಚೆ ನಡೆಸಲಾಯಿತು. ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಯನ್ನು ಅತ್ಯಂತ ವಿಜ್ರಂಭಣೆ ಹಾಗೂ ವ್ಯವಸ್ಥಿತವಾಗಿ ನಡೆಸಲು ನಮ್ಮ ಸರ್ಕಾರ ಸಕಲ ಸಿದ್ಧತೆಯನ್ನು ಮಾಡಿದೆ. ಅದರ ಭಾಗವಾಗಿ ಗಣ್ಯರ ಸ್ವಾಗತಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ವಿಸ್ತ್ರತವಾಗಿ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಕಾರ್ಮಿಕ ಸಚಿವರಾದ ಶ್ರೀ ಸಂತೋಷ ಲಾಡ್ ಹಾಗೂ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.
2
76
ಬೆಂಗಳೂರಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ನಲ್ಲಿ * ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ * ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ * ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ * ಬಾಗಲಕೋಟೆ ವಿಶ್ವವಿದ್ಯಾಲಯ ಜಮಖಂಡಿ * ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಇವುಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ​ಸಭೆಯಲ್ಲಿ ವಿಶ್ವವಿದ್ಯಾಲಯಗಳ * ಮೂಲಸೌಕರ್ಯ ಅಭಿವೃದ್ಧಿ ಮತ್ತು ಕಟ್ಟಡ ಕಾಮಗಾರಿಗಳು * ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವಿವರ * ವಿದ್ಯಾರ್ಥಿಗಳ ದಾಖಲಾತಿ ಮತ್ತು ಆರ್ಥಿಕ ಪರಿಸ್ಥಿತಿ * ಭವಿಷ್ಯದ ಯೋಜನೆಗಳು * ವಿಶ್ವವಿದ್ಯಾಲಯಕ್ಕೆ ಇರುವ ಸಮಸ್ಯೆಗಳು, ಅದಕ್ಕೆ ಕೈಗೊಂಡ ಕ್ರಮಗಳು ಇವುಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಮಾಹಿತಿ ಪಡೆಯಲಾಯಿತು. ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಗುಣಮಟ್ಟ ಹೆಚ್ಚಿಸಲು ಯೊಜನೆ ರೂಪಿಸುವುದು ಹಾಗೂ ವಿವಿಗಳನ್ನು ಅಭಿವೃದ್ಧಿ ಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ​ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಶ್ರೀಮತಿ ತುಳಸಿ ಮದ್ದಿನೇನಿ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಪ್ರೊ. ಕೆ ಶಿವಶಂಕರ, ವಿಶ್ವವಿದ್ಯಾಲಯಗಳ ಕುಲಪತಿಗಳು, ರಿಜಿಸ್ಟ್ರಾರ್ ಗಳು, ಹಣಕಾಸು ಅಧಿಕಾರಿಗಳು ಉಪಸ್ಥಿತರಿದ್ದರು.
64