Sikandar - ಸಿಕಂದರ್. retweeted
ಮಾಜಿ ಸಚಿವರು ಹಾಗೂ ಹಿರಿಯ ನಾಯಕರಾದ @CMahadevappa ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿಯಾಗಿ ಆತ್ಮೀಯವಾಗಿ ಮಾತುಕತೆ ನಡೆಸಿದೆ.
ಈ ಸಂದರ್ಭದಲ್ಲಿ ವಸತಿ ಸಚಿವರಾದ ಶ್ರೀ @BZZameerAhmedK, ಕರ್ನಾಟಕ ವಿಧಾನ ಪರಿಷತ್ ಮಾಜಿ ಸದಸ್ಯರಾದ ಶ್ರೀ ನಸೀರ್ ಅಹ್ಮದ್ ಅವರು ಉಪಸ್ಥಿತರಿದ್ದರು.
#DrHCMahadevappa #ZameerAhmedKhan #NaseerAhmed #SeniorLeaders #KarnatakaCongressLeaders #DrYathindraSiddaramaiah
Sikandar - ಸಿಕಂದರ್. retweeted
ಮೈಸೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ‘ಯುವ ಸಂಸತ್ತು-2026’ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂವಿಧಾನವೇ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯದ ಭರವಸೆಯಾಗಿದೆ.
ಸಮಾಜದ ಬದಲಾವಣೆ ನಮ್ಮಿಂದಲೇ ಆರಂಭವಾಗಬೇಕಿದ್ದು, ಯುವಜನತೆ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗಗಳ ಕಾರ್ಯವೈಖರಿಯ ಬಗ್ಗೆ ಅರಿತುಕೊಳ್ಳಬೇಕು ಎಂದು ತಿಳಿಸಿದೆ.
ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂಸತ್ತಿನ ಕಾರ್ಯನಿರ್ವಹಣೆಯನ್ನು ಮಕ್ಕಳು ಅತ್ಯಂತ ಅರ್ಥಪೂರ್ಣವಾಗಿ ಪ್ರಸ್ತುತಪಡಿಸಿದ ರೀತಿ ಮೆಚ್ಚುಗೆಗೆ ಪಾತ್ರವಾಯಿತು.
#ಸಂವಿಧಾನದಿನ #YouthParliament2026 #Mysuru #IndianConstitution #DrYathindraSiddaramaiah
Sikandar - ಸಿಕಂದರ್. retweeted
ನಾಳೆ ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಂವಿಧಾನ ದಿನಾಚರಣೆ ಅಂಗವಾಗಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು ಇವರ ಸಹಯೋಗದಲ್ಲಿ ಆಯೋಜಿಸಿರುವ ವೇದಿಕೆ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿದೆ.
ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು ಹಾಗೂ ಸಾರ್ವಜನಿಕರಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವುದು, ವೇದಿಕೆ ಸಿದ್ಧತೆ, ಭದ್ರತೆ, ಆಸನ ವ್ಯವಸ್ಥೆ ಸೇರಿದಂತೆ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದೆ.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಶ್ರೀ @KHMuniyappaklr, ಕೃಷಿ ಸಚಿವರಾದ ಶ್ರೀ @pmnarendraswamy, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಬೀರಿಹುಂಡಿ ಬಸವಣ್ಣ, ಮಾಜಿ ಶಾಸಕರಾದ ಶ್ರೀ ಎಂ. ಕೆ. ಸೋಮಶೇಖರ್, ಜಿಲ್ಲಾಧಿಕಾರಿಗಳಾದ ಶ್ರೀ ಜಿ. ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಎನ್. ವಿಷ್ಣುವರ್ಧನ ಸೇರಿದಂತೆ ಸಮಾಜ ಕಲ್ಯಾಣ ಮತ್ತಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
#ConstitutionDay #Mysuru #IndianConstitution #KHMuniyappa #PMNarendraswamy #DrYathindraSiddaramaiah
Sikandar - ಸಿಕಂದರ್. retweeted
ಸಂವಿಧಾನ ದಿನಾಚರಣೆ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ, ಮೈಸೂರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಮೈಸೂರಿನಲ್ಲಿ ಆಯೋಜಿಸಲಾಗಿದ್ದ ’ರಾಜ್ಯ ಮಟ್ಟದ ಯುವ ಸಂಸತ್ತು–2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದೆ.
ಈ ಬಾರಿ ಸಂವಿಧಾನ ದಿನಾಚರಣೆಯನ್ನು ಸಾಂಸ್ಕೃತಿಕ ಹಾಗೂ ಐತಿಹಾಸಿಕ ನಗರಿ ಮೈಸೂರಿನಲ್ಲಿ ಆಯೋಜಿಸಿರುವುದು ಸಂತಸದ ವಿಚಾರ. ಅದರ ಅಂಗವಾಗಿ ಯುವ ಸಂಸತ್ತನ್ನು ಆಯೋಜಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಮತ್ತು ಧನ್ಯವಾದಗಳನ್ನು ತಿಳಿಸಿದೆ.
ಸಂವಿಧಾನವು ಜಾತಿ, ಧರ್ಮ, ಭಾಷೆ ಸೇರಿದಂತೆ ಎಲ್ಲ ಭೇದಗಳನ್ನು ಮೀರಿ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಘನತೆಯ ಬದುಕಿನ ಭರವಸೆ ನೀಡಿದೆ. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢವಾಗಿರಬೇಕಾದರೆ ಅದನ್ನು ಮುನ್ನಡೆಸುವವರು ಉತ್ತಮ ಮೌಲ್ಯಗಳನ್ನು ಹೊಂದಿರಬೇಕು. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ಮೊದಲು ನಾವು ಬದಲಾಗಬೇಕು ಎಂದು ತಿಳಿಸಿದೆ.
ಯುವಜನತೆ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಕಾರ್ಯವೈಖರಿ ಬಗ್ಗೆ ಅರಿತುಕೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವ ರೀತಿಯ ಸುಧಾರಣೆಗಳು ಅಗತ್ಯವಿವೆ ಎಂದು ಆಲೋಚಿಸಬೇಕು. ಇಂತಹ ಯುವ ಸಂಸತ್ತು ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಸಂವಿಧಾನದ ಅರಿವು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಲು ಸಹಕಾರಿಯಾಗಲಿವೆ ಎಂದು ತಿಳಿಸಿದೆ.
ಮೈಸೂರಿನ ಇತಿಹಾಸ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನಪರ ಆಡಳಿತ, ದೂರದೃಷ್ಟಿ ಮತ್ತು ಸಾಮಾಜಿಕ ಸುಧಾರಣೆಗಳನ್ನು ಯುವಜನತೆ ಅರಿತುಕೊಳ್ಳಬೇಕು. ಜಾತಿ, ಮತ, ಧರ್ಮಗಳ ಕಟ್ಟುಪಾಡುಗಳನ್ನು ಮೀರಿ ಮಾನವೀಯತೆ, ಸಮಾನತೆ ಮತ್ತು ಸಹಬಾಳ್ವೆಯ ಮೌಲ್ಯಗಳೊಂದಿಗೆ ಬೆಳೆಯಬೇಕು ಎಂದು ಕರೆ ನೀಡಿದೆ.
ಮಕ್ಕಳು ನಡೆಸಿಕೊಟ್ಟ ಯುವ ಸಂಸತ್ತಿನ ಕಲಾಪಗಳನ್ನು ಆಸಕ್ತಿಯಿಂದ ವೀಕ್ಷಿಸಿದೆ. ಶಾಸಕಾಂಗದ ಕಾರ್ಯವೈಖರಿ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಜವಾಬ್ದಾರಿಗಳು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮಕ್ಕಳು ಸಂಸತ್ತಿನ ಮಾದರಿಯಲ್ಲಿ ಪ್ರಸ್ತುತಪಡಿಸಿದ ರೀತಿ ಖುಷಿಯಾಯಿತು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರಾದ ಶ್ರೀ @KHMuniyappaklr, ಕೃಷಿ ಸಚಿವರಾದ ಶ್ರೀ @pmnarendraswamy, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಮಾಜಿ ಸಂಸದರಾದ ಬಿ.ಎನ್. ಚಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.
#YouthParliament #ConstitutionDay #DrBRAmbedkar #Mysuru #IndianConstitution #YouthEmpowerment #DrYathindraSiddaramaiah #KHMuniyappa #PMNarendraswamy #SocialWelfareDepartment
Sikandar - ಸಿಕಂದರ್. retweeted
ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಘಟಕದ ಕರ್ನಾಟಕ ರಕ್ಷಣಾ ವೇದಿಕೆ ಪ್ರಧಾನ ಕೇಂದ್ರ ಕಚೇರಿಯನ್ನು ಮೈಸೂರಿನ ಜೆ.ಪಿ. ನಗರದ ಕವಿತಾ ಬೇಕರಿ ಸರ್ಕಲ್‌ನ ಡಿ ಬ್ಲಾಕ್‌ನಲ್ಲಿ ಉದ್ಘಾಟಿಸಿ, ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದೆ.
ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕನ್ನಡಪರ ಸಂಘಟನೆಗಳು ದಶಕಗಳಿಂದ ನಡೆಸಿಕೊಂಡು ಬರುತ್ತಿರುವ ಹೋರಾಟ ಶ್ಲಾಘನೀಯವಾಗಿದೆ. ಎಲ್ಲಾ ಕನ್ನಡಪರ ಸಂಘಟನೆಗಳಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದೆ.
ಕರ್ನಾಟಕಕ್ಕೆ ಬಂದು ಉದ್ಯೋಗ, ವ್ಯಾಪಾರ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ನೆಲೆಸುವ ಅನ್ಯಭಾಷಿಕರು ಇಲ್ಲಿನ ಭಾಷೆ, ಸಂಸ್ಕೃತಿಯನ್ನು ಗೌರವಿಸುವುದರ ಜೊತೆಗೆ ಕನ್ನಡವನ್ನು ಕಲಿತು, ತಮ್ಮ ದೈನಂದಿನ ವ್ಯವಹಾರಗಳಲ್ಲಿ ಕನ್ನಡವನ್ನೇ ಬಳಸುವ ಮನೋಭಾವ ಬೆಳೆಸಿಕೊಳ್ಳಬೇಕು. ನಮ್ಮ ನೆಲದ ಸಂಪನ್ಮೂಲಗಳನ್ನು ಬಳಸಿಕೊಂಡು ಬದುಕು ಕಟ್ಟಿಕೊಳ್ಳುವವರು ಇಲ್ಲಿನ ಭಾಷೆಯನ್ನೂ ಗೌರವಿಸುವುದು ಅತ್ಯಗತ್ಯ ಎಂದು ತಿಳಿಸಿದೆ.
ನಮ್ಮ ತಂದೆಯವರಾದ ಶ್ರೀ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲೂ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದರು. ಕನ್ನಡದ ಅಸ್ಮಿತೆ ಮತ್ತು ಅಸ್ತಿತ್ವವನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದೆ.
ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಶ್ರೀ ಎಂ.ಕೆ. ಸೋಮಶೇಖರ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಮಾರ್ ಶೆಟ್ಟಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಶ್ರೀ ಆರ್. ಮೋಹನ್, ಮೈಸೂರು ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಎಂ.ಎ. ಮಂಜುನಾಥ್ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.
#KannadaLanguage #KarnatakaRakshanaVedike #Kannada #KarnatakaCulture #Mysuru #chamarajanagara
Sikandar - ಸಿಕಂದರ್. retweeted
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವತಿಯಿಂದ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಬೆಂಗಳೂರಿನ ಗೃಹ ಕಚೇರಿಯಲ್ಲಿ ನಡೆಸಿದೆ.
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಅನುದಾನದಡಿ 400.24 ಕೋಟಿ ರೂ. ವೆಚ್ಚದಲ್ಲಿ 110 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಎಫ್‌ಎಸ್‌ಟಿಪಿ ಯೋಜನೆಗಳು ಹಾಗೂ 49 ಪಟ್ಟಣಗಳಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ಸ್ಥಿತಿಗತಿಯನ್ನು ಪರಿಶೀಲಿಸಿದೆ. ಒಳಚರಂಡಿ ವ್ಯವಸ್ಥೆ, ತ್ಯಾಜ್ಯ ಸಂಸ್ಕರಣಾ ಘಟಕಗಳು ಹಾಗೂ ಬೃಹತ್ ನೀರು ಸರಬರಾಜು ಯೋಜನೆಗಳ ಅನುಷ್ಠಾನದ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡೆ.
ಅದೇ ರೀತಿ, ಸ್ವಚ್ಛ ಭಾರತ್ ಮಿಷನ್ ಅನುದಾನದಡಿ ಒಟ್ಟು 1,379.91 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅನುಮೋದನೆಗೊಂಡಿರುವ 279 ಎಸ್‌ಟಿಪಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಲಾಯಿತು.
ಕಾಮಗಾರಿಗಳಿಗೆ ನಿಗದಿಪಡಿಸಿದ್ದ ಸ್ಥಳಾವಕಾಶದ ಸಮಸ್ಯೆಯಿಂದಾಗಿ ಕೆಲಸಗಳು ವಿಳಂಬವಾಗುತ್ತಿರುವ ಕಡೆಗಳಲ್ಲಿ ಪರ್ಯಾಯ ಸ್ಥಳಗಳನ್ನು ಗುರುತಿಸಿ ಕಾಮಗಾರಿಗಳನ್ನು ಮುಂದುವರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಕೇಂದ್ರ ಸರ್ಕಾರದ ಅನುದಾನದಡಿ ಕೈಗೆತ್ತಿಕೊಂಡಿರುವ ಯೋಜನೆಗಳನ್ನು ಶೀಘ್ರವೇ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯ ಸೌಲಭ್ಯಗಳನ್ನು ಒದಗಿಸುವಂತೆ ನಿರ್ದೇಶನ ನೀಡಿದೆ.
ನಗರಗಳ ಸ್ವಚ್ಛತೆ, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ, ಸುಸ್ಥಿರ ಒಳಚರಂಡಿ ವ್ಯವಸ್ಥೆ ಹಾಗೂ ಗುಣಮಟ್ಟದ ನೀರು ಸರಬರಾಜು ನಮ್ಮ ಆದ್ಯತೆಯಾಗಿದ್ದು, ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುವಂತೆ ನಿರಂತರವಾಗಿ ಪರಿಶೀಲಿಸಲಾಗುವುದು.
ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಾದ ಶ್ರೀಮತಿ ಬಿ.ಬಿ. ಕಾವೇರಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಟಿ. ಭೂಬಾಲನ್, ಟಾಸ್ಕ್ ಮ್ಯಾನೇಜರ್ ಶ್ರೀ ನಂದೀಶ್, ಶ್ರೀ ಕೆ.ಪಿ. ಜಯರಾಮ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
#KUIDFC #UrbanDevelopment #SwachhBharatMission #InfrastructureDevelopment #CleanCities #DrYathindraSiddaramaiah
Sikandar - ಸಿಕಂದರ್. retweeted
ನಗರ ಸ್ಥಳೀಯ ಸಂಸ್ಥೆಗಳ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕ, ಪರಿಣಾಮಕಾರಿ, ಜನಸ್ನೇಹಿ ಹಾಗೂ ತಂತ್ರಜ್ಞಾನ ಆಧಾರಿತವಾಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಗೃಹ ಕಚೇರಿಯಲ್ಲಿ POURSEVE' URBAN ERP ಸೂಟ್ ಕುರಿತ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿ, ಅದರ ಕಾರ್ಯವೈಖರಿ ಹಾಗೂ ಸಾಧ್ಯತೆಗಳ ಕುರಿತು ಮಾಹಿತಿ ಪಡೆದೆ.
ಈ ಸಮಗ್ರ ಡಿಜಿಟಲ್ ವ್ಯವಸ್ಥೆಯಿಂದ ಆಸ್ತಿ ತೆರಿಗೆ ನಿರ್ವಹಣೆ, ಕುಡಿಯುವ ನೀರಿನ ನಿರ್ವಹಣೆ, ವ್ಯಾಪಾರ ಪರವಾನಗಿ, ಮಾರುಕಟ್ಟೆ ಮತ್ತು ಮಳಿಗೆಗಳ ಬಾಡಿಗೆ, ಆನ್‌ಲೈನ್ ಪಾವತಿ, ಸಾರ್ವಜನಿಕ ಕುಂದುಕೊರತೆಗಳ ಪರಿಹಾರ, ಘನತ್ಯಾಜ್ಯ ನಿರ್ವಹಣೆ, ಅಭಿವೃದ್ಧಿ ಕಾಮಗಾರಿಗಳ ಮೇಲ್ವಿಚಾರಣೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಪ್ರಮುಖ ಸೇವೆಗಳನ್ನು ಒಂದೇ ವೇದಿಕೆಯಡಿ ತರಲು ಸಾಧ್ಯವಾಗುತ್ತದೆ.
ಕೃತಕ ಬುದ್ಧಿಮತ್ತೆ (AI), GIS ತಂತ್ರಜ್ಞಾನ, ಡಿಜಿಟಲ್ ದಾಖಲೆಗಳ ನಿರ್ವಹಣೆ, ರಿಯಲ್‌ಟೈಮ್ ಡ್ಯಾಶ್‌ಬೋರ್ಡ್ ಹಾಗೂ ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್‌ನಂತಹ ಆಧುನಿಕ ತಂತ್ರಜ್ಞಾನಗಳ ಬಳಕೆಯ ಮೂಲಕ ಆಡಳಿತದಲ್ಲಿ ವೇಗ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸಲು ಈ ವ್ಯವಸ್ಥೆ ಸಹಕಾರಿಯಾಗಲಿದೆ.
ಈ ಸಂದರ್ಭದಲ್ಲಿ ಈಗಾಗಲೇ ನಗರಾಭಿವೃದ್ಧಿ ಇಲಾಖೆಯಲ್ಲಿ ಅಭಿವೃದ್ಧಿಪಡಿಸಿರುವ ಡಿಜಿಟಲ್ ವ್ಯವಸ್ಥೆಗಳ ಪುನರಾವರ್ತನೆ ತಪ್ಪಿಸಿ, ಉತ್ತಮ ತಂತ್ರಾಂಶಗಳನ್ನು ಸಮನ್ವಯಗೊಳಿಸುವುದು, ಇಲಾಖೆಗೆ ಸಂಪೂರ್ಣ ಸೋರ್ಸ್ ಕೋಡ್ ಹಸ್ತಾಂತರಿಸುವುದು ಹಾಗೂ ಮುಂದಿನ ಮೂರು ವರ್ಷಗಳ ಕಾಲ ತಾಂತ್ರಿಕ ನೆರವು ಒದಗಿಸುವ ಪ್ರಸ್ತಾವನೆಗಳ ಬಗ್ಗೆಯೂ ಚರ್ಚಿಸಲಾಯಿತು.
ನಗರಾಡಳಿತದಲ್ಲಿ ತಂತ್ರಜ್ಞಾನದ ಸಮರ್ಪಕ ಬಳಕೆಯ ಮೂಲಕ ಜನರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ, ತ್ವರಿತವಾಗಿ ಮತ್ತು ಪಾರದರ್ಶಕವಾಗಿ ತಲುಪಿಸುವುದು ನಮ್ಮ ಆದ್ಯತೆಯಾಗಿದೆ.
ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಾದ ಶ್ರೀಮತಿ ಬಿ.ಬಿ. ಕಾವೇರಿ, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ರಾಜ್ಯಾಧ್ಯಕ್ಷರಾದ ಶ್ರೀಮತಿ ಶೈಲಾ ಕೆ.ಡಿ., ಸಾಫ್ಟ್‌ವೇರ್ ಕಂಪನಿಯ ಪ್ರತಿನಿಧಿಗಳು ಹಾಗೂ ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
#DigitalGovernance #UrbanDevelopment #eGovernance #SmartGovernance #DigitalKarnataka #DrYathindraSiddaramaiah
Sikandar - ಸಿಕಂದರ್. retweeted
ಸಂವಿಧಾನವನ್ನು ವಿರೋಧಿಸುತ್ತಿರುವ ಪಟ್ಟಭದ್ರರು ಮೊದಲೆಲ್ಲಾ ಸಂವಿಧಾನವನ್ನು ಬದಲಿಸುತ್ತೇವೆ ಎಂದು ಆರ್ಭಟಿಸಿದರು. ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಅವರು ಕೊಟ್ಟಿರುವ ನಮ್ಮ ಹೆಮ್ಮೆಯ ಸಂವಿಧಾನ ಅಷ್ಟು ದುರ್ಬಲ ಅಲ್ಲ. ಸಂವಿಧಾನವನ್ನು ಬದಲಿಸುವುದು ಯಾರಿಂದಲೂ ಸಾಧ್ಯವಿಲ್ಲ. ಈ ಸತ್ಯ ಗೊತ್ತಾದ ಬಳಿಕ ಸಂವಿಧಾನವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂವಿಧಾನವನ್ನು ಅಸ್ಥಿರಗೊಳಿಸದಂತೆ ತಡೆಯಲು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಲು ಹಾಗೂ ಸಾಮಾಜಿಕ ನ್ಯಾಯದ ಸಂದೇಶವನ್ನು ಸಾರಿ ಹೇಳಲು ರಾಜ್ಯ ಸರ್ಕಾರದ ವತಿಯಿಂದ ನವೆಂಬರ್ 26ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಂವಿಧಾನ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮಕ್ಕೆ ಎಲ್ಲರಿಗೂ ಸ್ವಾಗತ.
#ConstitutionDay2026 #DrBRAmbedkar #DrYathindraSiddaramaiah #SocialJustice #SamvidhanDiwas #IndianConstitution
Sikandar - ಸಿಕಂದರ್. retweeted
"𝑰 𝒘𝒊𝒔𝒉 𝒕𝒉𝒆𝒓𝒆 𝒘𝒂𝒔 𝒂 𝒘𝒂𝒚 𝒕𝒐 𝒌𝒏𝒐𝒘 𝒚𝒐𝒖'𝒓𝒆 𝒊𝒏 '𝒕𝒉𝒆 𝒈𝒐𝒐𝒅 𝒐𝒍𝒅 𝒅𝒂𝒚𝒔', 𝒃𝒆𝒇𝒐𝒓𝒆 𝒚𝒐𝒖'𝒗𝒆 𝒂𝒄𝒕𝒖𝒂𝒍𝒍𝒚 𝒍𝒆𝒇𝒕 𝒕𝒉𝒆𝒎." 🥹🫶
Sikandar - ಸಿಕಂದರ್. retweeted
Bilkis Bano was GANG-RAPED and 14 members of her family were MURDERED including her daughter.
And now, these murderers were given bail by Supreme Court. This happened just few weeks ago.
Sikandar - ಸಿಕಂದರ್. retweeted
ಕರ್ನಾಟಕ ರಾಜ್ಯ ನಗರ ಯೋಜನಾ ಮಂಡಳಿಯ 69ನೇ ಸಭೆಯನ್ನು ಇಂದು ಗೃಹ ಕಚೇರಿಯಲ್ಲಿ ನಡೆಸಿದೆ.
ಬಿ ಖಾತಾ ನಿವೇಶನಗಳನ್ನು ಎ ಖಾತಾ ಗೆ ಪರಿವರ್ತಿಸಲು 674 GPS ರೋವರ್ ಖರೀದಿಸಿ ಆಧುನಿಕವಾಗಿ ಸರ್ವೇ ತಂತ್ರಜ್ಞಾನ ಅಳವಡಿಕೆ ಮಾಡಲು ನಿರ್ಧರಿಸಲಾಯಿತು.
ಎಂ.ಎಸ್. ಬಿಲ್ಡಿಂಗ್ ನಲ್ಲಿ ಸ್ಥಳದ ಕೊರತೆಯಿದ್ದು ಕರ್ನಾಟಕದ ರಾಜ್ಯ ನಗರ ಯೋಜನಾ ಮಂಡಳಿ ಕಚೇರಿಯನ್ನು ಪ್ರತ್ಯೇಕ ಕಟ್ಟಡದಲ್ಲಿ ನಿರ್ವಹಿಸಲು ಅನುಕೂಲವಾಗುವಂತೆ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಇಲಾಖೆಗೆ ಹಂಚಿಕೆಯಾಗಿರುವ ನಾಗರೀಕ ಸೌಲಭ್ಯ ನಿವೇಶನದಲ್ಲಿ ಕಟ್ಟಡ ನಿರ್ಮಾಣ ಮಾಡುವ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದೆ.
ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರಗಳು, ಯೋಜನಾ ಪ್ರಾಧಿಕಾರಗಳು ಹಾಗೂ ಪುರಸಭೆ/ನಗರಸಭೆ ಯೋಜನಾ ಪ್ರಾಧಿಕಾರಗಳ ಅಧಿಕಾರಿಗಳು ಮತ್ತು ತಾಂತ್ರಿಕ ಸಿಬ್ಬಂದಿಗಳನ್ನು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ತರಬೇತಿ ಕಾರ್ಯಕ್ರಮಗಳು, ಕಾರ್ಯಾಗಾರಗಳು ಹಾಗೂ ಸಮ್ಮೇಳನ ಕಾರ್ಯಕ್ರಮಗಳಿಗೆ ನಿಯೋಜಿಸುವ ಕುರಿತು ಚರ್ಚಿಸಲಾಯಿತು.
ನಗರೀಕರಣವು ಕೇವಲ ಕಟ್ಟಡಗಳ ನಿರ್ಮಾಣಕ್ಕೆ ಸೀಮಿತವಾಗದೆ, ಜನರ ಜೀವನಮಟ್ಟ ಸುಧಾರಿಸುವ, ಪರಿಸರ ಸಂರಕ್ಷಣೆಗೆ ಪೂರಕವಾಗಿರುವ ಹಾಗೂ ಭವಿಷ್ಯದ ಪೀಳಿಗೆಗಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡಿರುವ ಸಮಗ್ರ ಅಭಿವೃದ್ಧಿಯ ಪ್ರಕ್ರಿಯೆಯಾಗಬೇಕು ಎಂಬ ಆಶಯದೊಂದಿಗೆ ಕಾರ್ಯನಿರ್ವಹಿಸಲಾಗುತ್ತಿದೆ.
ರಾಜ್ಯದ ಪ್ರತಿಯೊಂದು ನಗರವೂ ಸುಸಜ್ಜಿತ ಮೂಲಸೌಕರ್ಯ, ವೈಜ್ಞಾನಿಕ ಯೋಜನೆ ಮತ್ತು ಸುಸ್ಥಿರ ಅಭಿವೃದ್ಧಿಯೊಂದಿಗೆ ಬೆಳೆಯುವಂತೆ ನಗರ ಯೋಜನಾ ಮಂಡಳಿಯ ಮೂಲಕ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಬದ್ಧರಾಗಿದ್ದೇವೆ.
ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಾದ ಶ್ರೀಮತಿ ಬಿ.ಬಿ. ಕಾವೇರಿ, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಮಹೇಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
#KarnatakaStateTownPlanningBoard #KarnatakaUrbanPlanning #UrbanDevelopmentDepartment #BKhataToAKhata #BengaluruDevelopment #DrYathindraSiddaramaiah
Sikandar - ಸಿಕಂದರ್. retweeted
𝑻𝒉𝒆 𝒍𝒂𝒔𝒕 𝒐𝒏𝒆. 𝑻𝒉𝒆 𝒐𝒏𝒆 𝒕𝒉𝒂𝒕 𝒘𝒊𝒍𝒍 𝒔𝒕𝒂𝒚 𝒘𝒊𝒕𝒉 𝒖𝒔 𝒇𝒐𝒓𝒆𝒗𝒆𝒓. 🥹❤️
#OnThisDay in '2️⃣4️⃣, Virat Kohli raised his bat for a Test 💯 for the very last time. 🫡🇮🇳
#PlayBold #ನಮ್ಮRCB
Sikandar - ಸಿಕಂದರ್. retweeted
ಮೈಸೂರಿನಲ್ಲಿ ನವೆಂಬರ್ 26ರಂದು ನಡೆಯಲಿರುವ ಸಂವಿಧಾನ ದಿನಾಚರಣೆ ಅಂಗವಾಗಿ, ಪುರಭವನದ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಹಾಗೂ ಸಂವಿಧಾನದ ಪೀಠಿಕೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದೆ.
ಈ ಸಂದರ್ಭದಲ್ಲಿ ಡಾ. ಅಂಬೇಡ್ಕರ್ ಅವರ ಜೀವನ ಚರಿತ್ರೆ, ಹೋರಾಟ ಹಾಗೂ ಸಂವಿಧಾನ ರಚನೆಗೆ ಅವರು ನೀಡಿದ ಅಮೂಲ್ಯ ಕೊಡುಗೆಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಆಯೋಜಿಸಿರುವ ಎಲ್‌ಇಡಿ ತೆರದ ವಾಹನ ಪ್ರದರ್ಶನಕ್ಕೆ ಚಾಲನೆ ನೀಡಿದೆ.
ಕೃಷಿ ಸಚಿವರಾದ ಶ್ರೀ ಪಿ.ಎಂ. ನರೇಂದ್ರ ಸ್ವಾಮಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಎನ್. ವಿಷ್ಣುವರ್ಧನ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ಎಂ.ಕೆ. ಸವಿತಾ ಮತ್ತಿತರರು ಹಾಜರಿದ್ದರು.
#ConstitutionDay #DrBRAmbedkar #IndianConstitution #SocialJustice #Mysuru
Sikandar - ಸಿಕಂದರ್. retweeted
ನವದೆಹಲಿಯಲ್ಲಿ ಇಂದು ರಾಜ್ಯಸಭಾ ಸದಸ್ಯರಾದ ಶ್ರೀ @ajaymaken ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ.
ಇದೇ ವೇಳೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಶ್ರೀಮತಿ ಸೋನಿಯಾ ಗಾಂಧಿ ಅವರು ರಚಿಸಿರುವ ‘Belonging: A Journey of Love’ ಪುಸ್ತಕದ ಪ್ರತಿಯನ್ನು ಶ್ರೀ ಅಜಯ್ ಮಾಕೆನ್ ಅವರಿಗೆ ಗೌರವಪೂರ್ವಕವಾಗಿ ನೀಡಲಾಯಿತು.
ವಸತಿ ಸಚಿವರಾದ ಶ್ರೀ ಜಮೀರ್ ಅಹಮದ್ ಖಾನ್, ಕಾಂಗ್ರೆಸ್ ಮುಖಂಡರಾದ ಶ್ರೀ ದೀಪಕ್ ಚಿಂಚೋರೆ ಅವರು ಉಪಸ್ಥಿತರಿದ್ದರು.
#AjayMaken #SoniaGandhi #BelongingAJourneyOfLove #IndianNationalCongress #NewDelhi
Sikandar - ಸಿಕಂದರ್. retweeted
ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀ @ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ.
ಇದೇ ವೇಳೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಶ್ರೀಮತಿ ಸೋನಿಯಾ ಗಾಂಧಿ ಅವರು ರಚಿಸಿರುವ ‘Belonging: A Journey of Love’ ಪುಸ್ತಕದ ಪ್ರತಿಯನ್ನು ಶ್ರೀ ಮಲ್ಲಿಕಾರ್ಜುನ ಅವರಿಗೆ ಗೌರವಪೂರ್ವಕವಾಗಿ ನೀಡಲಾಯಿತು.
ಕೃಷಿ ಸಚಿವರಾದ ಶ್ರೀ ಪಿಎಂ ನರೇಂದ್ರಸ್ವಾಮಿ, ವಸತಿ ಸಚಿವರಾದ ಜಮೀರ್ ಅಹಮದ್ ಖಾನ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಸುಧಾಮ್ ದಾಸ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶ್ರೀ ಎಂ.ಸಿ. ವೇಣುಗೋಪಾಲ್ ಅವರು ಉಪಸ್ಥಿತರಿದ್ದರು.
@INCIndia
#MallikarjunKharge #SoniaGandhi #BelongingAJourneyOfLove #IndianNationalCongress #NewDelhi
Sikandar - ಸಿಕಂದರ್. retweeted
Mature words by @Dr_Yathindra_S
Only haters and slave-minded people can oppose this.
Sikandar - ಸಿಕಂದರ್. retweeted
ಇತಿಹಾಸ ಪ್ರಸಿದ್ಧ ಶ್ರೀ ಹಾಸನಾಂಬಾ ಉತ್ಸವ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಸಮಸ್ತ ಜನರ ಕಲ್ಯಾಣಕ್ಕಾಗಿ ಪ್ರಾರ್ಥಿಸಿದೆ.
ಬಳಿಕ ಫಲಪುಷ್ಪ ಪ್ರದರ್ಶನ, ಕುಸ್ತಿ ಹಾಗೂ ವಾಲಿಬಾಲ್ ಪಂದ್ಯಾಟಗಳಿಗೆ ಚಾಲನೆ ನೀಡಿದೆ.
ಹಾಸನದ ಅಧಿದೇವತೆ, ಭಕ್ತರ ಆರಾಧ್ಯ ದೈವ ಶ್ರೀ ಹಾಸನಾಂಬ ದೇವಿಯ ವಾರ್ಷಿಕ ಉತ್ಸವವು ನಾಡಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿದೆ. ಶುಕ್ರವಾರದ ಶುಭ ದಿನ ದೇವಿಯ ದರ್ಶನಭಾಗ್ಯ ದೊರೆತಿದ್ದು ನನ್ನ ಪಾಲಿನ ಸೌಭಾಗ್ಯವೆಂದು ನಂಬಿದ್ದೇನೆ.
ನಂಬಿಕೆ ಮತ್ತು ಆಧ್ಯಾತ್ಮಿಕತೆಯ ಸಂಗಮವಾಗಿರುವ ಈ ಉತ್ಸವವು ಹಾಸನದ ಐತಿಹಾಸಿಕ ವೈಭವವನ್ನು ಮತ್ತಷ್ಟು ಹೆಚ್ಚಿಸುತ್ತಿದೆ. ಈ ಬಾರಿಯ ಉತ್ಸವದ ಆಯೋಜನೆಯಲ್ಲಿ ಶ್ರದ್ಧಾ ಭಕ್ತಿಯಿಂದ ಕೆಲಸ ಮಾಡಿರುವ ಉಸ್ತುವಾರಿ ಸಚಿವರಾದ ಶಿವಲಿಂಗೇಗೌಡ ಅವರ ಶ್ರಮ ಅಭಿನಂದನಾರ್ಹ. ಅತ್ಯಂತ ಅಚ್ಚುಕಟ್ಟಾಗಿ, ವ್ಯವಸ್ಥಿತವಾಗಿ ನಡೆಯುತ್ತಿರುವ ಉತ್ಸವವು ಯಶಸ್ಸು ಕಾಣಲಿ ಎಂದು ಹಾರೈಸುತ್ತೇನೆ.
ಹಾಸನಾಂಬ ದೇವಿಯ ಕೃಪಾಶೀರ್ವಾದದಿಂದ ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ಮತ್ತು ನೆಮ್ಮದಿ ದೊರೆಯಲಿ. ಸರ್ವರ ಬದುಕಿನಲ್ಲಿ ಒಳಿತು, ಸಂತೋಷ ಮತ್ತು ಸೌಹಾರ್ದತೆ ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆ.
Sikandar - ಸಿಕಂದರ್. retweeted
ಚಿಂತಾಮಣಿ ನಗರದ ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿಯ ದೃಷ್ಟಿಯಿಂದ ಚಿಂತಾಮಣಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸುಮಾರು 850 ಎಕರೆ ಪ್ರದೇಶದಲ್ಲಿ ನೂತನ ಟೌನ್‌ಶಿಪ್ ನಿರ್ಮಿಸುವ ಯೋಜನೆ ಕುರಿತು ಇಂದು ಗೃಹ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ.
ಈಗಾಗಲೇ ಟೌನ್‌ಶಿಪ್ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, ಯೋಜನೆಯನ್ನು ಅಂತಿಮ ರೂಪಕ್ಕೆ ತರಲಾಗಿದೆ. ಈ ಯೋಜನೆ ಕಾರ್ಯರೂಪಕ್ಕೆ ಬಂದಲ್ಲಿ ಚಿಂತಾಮಣಿ ನಗರದ ಅಭಿವೃದ್ಧಿಗೆ ಹೊಸ ವೇಗ ದೊರೆಯುವುದರ ಜೊತೆಗೆ ಅಗತ್ಯ ಮೂಲಸೌಕರ್ಯಗಳು ಹಾಗೂ ಸುಸಜ್ಜಿತ ವಸತಿ ಮತ್ತು ನಾಗರಿಕ ಸೌಲಭ್ಯಗಳು ಒಂದೇ ಸೂರಿನಡಿ ಲಭ್ಯವಾಗಲಿವೆ.
ಯೋಜನೆಗೆ ಅಗತ್ಯವಿರುವ ಭೂಮಿಯನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಸಹಕಾರ ಪಡೆದು, ನಿಯಮಾನುಸಾರ ಮುಂದಿನ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಚಿಂತಾಮಣಿಯನ್ನು ಯೋಜಿತ ನಗರವಾಗಿ ಅಭಿವೃದ್ಧಿಪಡಿಸುವುದು, ಭವಿಷ್ಯದ ಅಗತ್ಯಗಳಿಗೆ ತಕ್ಕಂತೆ ಮೂಲಸೌಕರ್ಯಗಳನ್ನು ಕಲ್ಪಿಸುವುದು ಹಾಗೂ ಜನರಿಗೆ ಉತ್ತಮ ನಾಗರಿಕ ಸೌಲಭ್ಯಗಳನ್ನು ಒದಗಿಸುವುದು ನನ್ನ ಆದ್ಯತೆಯಾಗಿದೆ.
ಸಭೆಯಲ್ಲಿ ಚಿಂತಾಮಣಿ ಶಾಸಕರಾದ ಡಾ. ಎಂ.ಸಿ. ಸುಧಾಕರ್, ಚಿಂತಾಮಣಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಶ್ರೀನಾಥ್ (ಬಾಬು ರೆಡ್ಡಿ), ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಾದ ಶ್ರೀಮತಿ ಬಿ.ಬಿ. ಕಾವೇರಿ, ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಾದ ಶ್ರೀ ಶಿವಾನಂದ ಕಪಾಶಿ, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳಾದ ಶ್ರೀ ಪ್ರಭು ಜಿ., ಆಯುಕ್ತಾಲಯದ ನಿರ್ದೇಶಕರಾದ ಶ್ರೀ ತಿಪ್ಪೇಸ್ವಾಮಿ ಎನ್.ಕೆ. ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
#Chintamani #UrbanDevelopment #TownshipDevelopment #SustainableDevelopment #InfrastructureDevelopment #KarnatakaDevelopment #UrbanPlanning #PublicInfrastructure
Sikandar - ಸಿಕಂದರ್. retweeted
ಇಂದು ನನ್ನ ಹುಟ್ಟೂರಾದ ಸಿದ್ದರಾಮನಹುಂಡಿಯಲ್ಲಿ ದೊರೆತ ಹೃದಯಸ್ಪರ್ಶಿ ಸ್ವಾಗತವಿದು.
ಜನರ ಪ್ರೀತಿ - ಅಭಿಮಾನ ಬೆಲೆ ಕಟ್ಟಲಾಗದ್ದು. ನನ್ನ ಜೀವದಲ್ಲಿ ಕೊನೆಯುಸಿರು ಇರುವವರೆಗೂ ನಿಮಗೆ ನಾನು ಋಣಿ.
Sikandar - ಸಿಕಂದರ್. retweeted
ಮೈಸೂರಿನ ಲಲಿತಾದ್ರಿಪುರ ಸುತ್ತಮುತ್ತ ಹಿಂದೆ ಕಸದ ರಾಶಿಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದ ಸ್ಥಳಕ್ಕೆ ಇಂದು ನೇರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಈ ಹಿಂದೆ ಭೇಟಿ ನೀಡಿ ನೀಡಿದ್ದ ಸೂಚನೆಯಂತೆ ಸ್ಥಳವನ್ನು ಸ್ವಚ್ಛಗೊಳಿಸಲಾಗಿದ್ದು, ಇದೀಗ ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿದೆ. ಸಾರ್ವಜನಿಕರಿಗೆ ಸ್ವಚ್ಛ ಹಾಗೂ ಸುಂದರ ಪರಿಸರ ಒದಗಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರೆಯಲಿದೆ.
ಈ ಸಂದರ್ಭದಲ್ಲಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ಎಂ.ಕೆ. ಸವಿತಾ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
#mysuru



















































