ಇಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದ ‘ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಮ್ಯಾನೇಜ್ಮೆಂಟ್’ ಉದ್ಘಾಟನೆ ಹಾಗೂ ‘ನಾರಾಯಣ ಪ್ರಜ್ಞಾಲಯ’ ಶಂಕುಸ್ಥಾಪನಾ ಸಮಾರಂಭ ನೆರವೇರಿತು.
ಶಿಕ್ಷಣ, ಸಂಶೋಧನೆ ಹಾಗೂ ಜ್ಞಾನಾಧಾರಿತ ಸಮಾಜ ನಿರ್ಮಾಣಕ್ಕೆ ಮತ್ತಷ್ಟು ಬಲ ನೀಡುವ ಮೂಲಕ ಯುವ ಪೀಳಿಗೆಗೆ ಹೊಸ ಅವಕಾಶಗಳ ಬಾಗಿಲು ತೆರೆಯಲಿ ಎಂಬ ಆಶಯ ನಮ್ಮದು.
ಈ ವೇಳೆ ಸಿಎಂ ಶ್ರೀ DK Shivakumar ಅವರು, ನಮ್ಮ ಅಣ್ಣನವರು & GEF(M) ಅಧ್ಯಕ್ಷರು ಹಾಗೂ RISM ಕುಲಪತಿಗಳಾದ ಡಾ. ಎಂ.ಆರ್. ಜಯರಾಮ್, ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯತಂತ್ರ ಅಧಿಕಾರಿ ಶ್ರೀ ಗುರುಚರಣ್ ಗೊಲ್ಲರ್ಕೇರಿ (ನಿವೃತ್ತ ಐಎಎಸ್ ಅಧಿಕಾರಿ) ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
#MSR – at Devanahalli, India
Dr. Manmohan Singh’s integrity has been vindicated. His record of economic transformation, political stability and social progress speaks for itself.
This article by CPP Chairperson Smt. Sonia Gandhi sets the record straight for history, and for generations to come.
2
81
Democracies are not maintained by those in power.
They are renewed by those who refuse to accept silence, the students who marched, and the leaders like LoP Sri @RahulGandhi who marched with them.
#ChhatronKiGoonj
@kharge
@RahulGandhi
@priyankagandhi
@kcvenugopalmp
@rssurjewala
@duttabhishek
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ @kharge ಅವರನ್ನು ಇಂದು ನವದೆಹಲಿಯಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ, ಅವರ ಜನ್ಮದಿನದ ಅಂಗವಾಗಿ ಹೂಗುಚ್ಛ ಅರ್ಪಿಸಿ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದೆನು.
ಈ ಸಂದರ್ಭದಲ್ಲಿ, ಸಂವಿಧಾನದ ಮೌಲ್ಯಗಳು, ಸಾಮಾಜಿಕ ನ್ಯಾಯ ಹಾಗೂ ಪ್ರಜಾಪ್ರಭುತ್ವದ ತತ್ವಗಳ ರಕ್ಷಣೆಯಲ್ಲಿ ಅವರ ನಾಯಕತ್ವ ಮತ್ತಷ್ಟು ಬಲಿಷ್ಠವಾಗಲಿ ಹಾಗೂ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ನಿರಂತರ ಜನಸೇವೆಯ ಶಕ್ತಿ ಲಭಿಸಲಿ ಎಂದು ಹಾರೈಸಿದೆನು.
ಅನ್ನದಾಸೋಹಿ ಶಿಕ್ಷಣ ಸಂತ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು.
ಆ ಭಗವಂತನು ನಿಮಗೆ ಹೆಚ್ಚು ಆಯಸ್ಸು, ಆರೋಗ್ಯˌ ಸಮಾಜ ಸೇವೆ ಮಾಡುವ ಶಕ್ತಿ ಕಲ್ಪಿಸಲಿ ಎಂದು ಪ್ರಾರ್ಥಿಸುತ್ತೇನೆ.
@Jaisrigurudev
2
57
ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ಅಗಲಿಕೆಯ ಸುದ್ದಿ ಮನಸ್ಸಿಗೆ ಅಪಾರ ವೇದನೆ ಉಂಟುಮಾಡಿದೆ.
ಕುಟುಂಬದ ಶಕ್ತಿಯಾಗಿ, ಮೌಲ್ಯಗಳ ಪ್ರತೀಕವಾಗಿ ಬದುಕಿದ ಅವರ ನೆನಪುಗಳು ಸದಾ ಚಿರಸ್ಥಾಯಿಯಾಗಿರಲಿ. ಭಗವಂತನು ಅವರ ದಿವ್ಯಾತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಈ ದುಃಖದ ಘಳಿಗೆಯಲ್ಲಿ ಶ್ರೀ ಎಚ್.ಡಿ. ದೇವೇಗೌಡ ಅವರ ಕುಟುಂಬಸ್ಥರಿಗೆ ಈ ನೋವನ್ನು ಸಹಿಸುವ ಧೈರ್ಯ ಮತ್ತು ಶಕ್ತಿಯನ್ನು ಕರುಣಿಸಲಿ.
3
61
ಹಿರಿಯ ರಾಜಕಾರಣಿ, ಮಾಜಿ ಸಚಿವರಾದ ಶ್ರೀ ರಾಮಚಂದ್ರಗೌಡ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಭಾವಪೂರ್ಣ ಗೌರವ ನಮನ ಸಲ್ಲಿಸಿ, ಅವರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದೆ
ಸಾರ್ವಜನಿಕ ಬದುಕಿನಲ್ಲಿ ಜನಸೇವೆಯನ್ನೇ ಧ್ಯೇಯವಾಗಿಸಿಕೊಂಡು ಕಾರ್ಯನಿರ್ವಹಿಸಿದ ಅವರ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ.
ಭಗವಂತನು ಅಗಲಿದ ಆತ್ಮಕ್ಕೆ ಚಿರಶಾಂತಿ ಹಾಗೂ ಸದ್ಗತಿಯನ್ನು ಕರುಣಿಸಲಿ.
2
77
ಸಂಗೀತ ಲೋಕದ ಅಮೂಲ್ಯ ರತ್ನ, ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ಅವರ ನಿಧನದ ಸುದ್ದಿ ಮನಸ್ಸಿಗೆ ಆಘಾತ ತಂದಿದೆ. ತಮ್ಮ ದೈವಿಕ ಕಂಠಸಿರಿಯ ಮೂಲಕ ಕೋಟ್ಯಂತರ ಹೃದಯಗಳಲ್ಲಿ ಅಳಿಸಲಾಗದ ಸ್ಥಾನ ಪಡೆದ ಅವರು, ಇನ್ನು ನೆನಪುಗಳಲ್ಲಿ ಮಾತ್ರ ಉಳಿದಿದ್ದಾರೆ.
ಭಗವಂತನು ಅವರ ಪುಣ್ಯಾತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ.
ಓಂ ಶಾಂತಿ.
1
6
70
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಅಭಿಯಾನದ ಅಂಗವಾಗಿ ಮನೆ-ಮನೆಗೆ ಭೇಟಿ ನೀಡುತ್ತಿರುವ ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಇಂದು ನನ್ನ ನಿವಾಸದಲ್ಲಿ ಅಗತ್ಯ ದಾಖಲೆಗಳು ಮತ್ತು ಮಾಹಿತಿಯನ್ನು ಸಲ್ಲಿಸಿ ನಮ್ಮ ಕುಟುಂಬದೊಂದಿಗೆ ನೋಂದಣಿ ಪ್ರಕ್ರಿಯೆಯಲ್ಲಿ ಭಾಗವಹಿಸಿದೆ.
ಇದು ಕೇವಲ ಒಂದು ಆಡಳಿತಾತ್ಮಕ ಪ್ರಕ್ರಿಯೆಯಲ್ಲ; ಪ್ರತಿಯೊಬ್ಬ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಸಂರಕ್ಷಿಸುವ ಮಹತ್ವದ ಕಾರ್ಯವಾಗಿದೆ. ಆದ್ದರಿಂದ ನಿಮ್ಮ ಮನೆಗೆ ಬರುವ ಬಿಎಲ್ಓಗಳಿಗೆ ಅಗತ್ಯ ಸಹಕಾರ ನೀಡಿ, ದಾಖಲೆಗಳನ್ನು ಒದಗಿಸಿ ಮತ್ತು ನಿಮ್ಮ ಹೆಸರು ಹಾಗೂ ವಿವರಗಳು ಮತದಾರರ ಪಟ್ಟಿಯಲ್ಲಿ ನಿಖರವಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳಿ ಎಂದು ವಿನಂತಿಸುತ್ತೇನೆ.
#SIR
3
113
ಬಿಡದಿಯ ಖಾಸಗಿ ರೆಸಾರ್ಟ್ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯಲ್ಲಿ ಭಾಗವಹಿಸಿ, ಮುಂಬರುವ ವಿಧಾನ ಪರಿಷತ್ ಚುನಾವಣೆ ಹಾಗೂ ಎಸ್ಐಆರ್ಗೆ ಸಂಬಂಧಿಸಿದ ವಿಚಾರಗಳ ಕುರಿತು ನಡೆದ ಚರ್ಚೆಯಲ್ಲಿ ಪಾಲ್ಗೊಂಡೆನು.
ಈ ಸಭೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ @siddaramaiah, ಶಾಸಕಾಂಗ ಪಕ್ಷದ ನಾಯಕರು, ಮುಖ್ಯಮಂತ್ರಿಗಳು ಆದ ಶ್ರೀ @DKShivakumar, ರಾಜ್ಯ ಉಸ್ತುವಾರಿ ಶ್ರೀ @rssurjewala, ಕೆಪಿಸಿಸಿ ಅಧ್ಯಕ್ಷ ಶ್ರೀ @HariprasadBK2, ರಾಜ್ಯ ಸರ್ಕಾರದ ಸಚಿವರು ಹಾಗೂ ಪಕ್ಷದ ಶಾಸಕರು ಉಪಸ್ಥಿತರಿದ್ದರು.
ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ಮೊಮ್ಮಗ, ಎಐಸಿಸಿ ಕಾರ್ಯದರ್ಶಿಗಳು ಹಾಗೂ ಗ್ಯಾರಂಟಿ ಸಮಿತಿ ರಾಜ್ಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರ ಅಕಾಲಿಕ ನಿಧನದ ಹಿನ್ನಲೆಯಲ್ಲಿ ಇಂದು ಅವರ ಸ್ವಗೃಹಕ್ಕೆ ಭೇಟಿ ನೀಡಿ, ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನಗಳನ್ನು ಸಲ್ಲಿಸಿ, ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದೆನು.
#rip #Surajhegde
ಇಂದು ದೆಹಲಿಯಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಆತ್ಮೀಯವಾಗಿ ಬೆಳಗಿನ ಉಪಹಾರ ಸೇವಿಸಿದ ಕ್ಷಣ.
ಈ ಸಂದರ್ಭದಲ್ಲಿ ಸಚಿವರು, ಶಾಸಕರು, ಉಪಸ್ಥಿತರಿದ್ದರು
ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.
ದೇವರು ತಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಸಮಾಜ ಸೇವೆ ಸಲ್ಲಿಸಲು ಹೆಚ್ಚಿನ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಹೊಸ ಭರವಸೆಯಾಗಿ ಉದಯಿಸಿ ಇಂದು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸಿ. ಜೋಸೆಫ್ ವಿಜಯ್ ಅವರಿಗೆ ಹಾರ್ದಿಕ ಅಭಿನಂದನೆಗಳು.
ನಿಮ್ಮ ಆಡಳಿತದಲ್ಲಿ ತಮಿಳುನಾಡು ಶಿಕ್ಷಣ, ತಂತ್ರಜ್ಞಾನ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಕಾಣಲಿ ಎಂದು ಹಾರೈಸುತ್ತೇನೆ.
#TamilNaduChiefMinister #tamilnadulegislativeassemblyelection2026
7
123
ಜನಸಾಮಾನ್ಯರ ಧ್ವನಿಯಾಗಿದ್ದ, ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಜನಪ್ರಿಯ ಶಾಸಕರಾಗಿದ್ದ ಡಿ. ಸುಧಾಕರ್ ಅವರ ನಿಧನದ ಸುದ್ದಿ ತಿಳಿದು ವೈಯಕ್ತಿಕವಾಗಿ ತುಂಬಾ ಬೇಸರ ತಂದಿದೆ.
ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.
4
69
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ವಿಜಯ ಪತಾಕೆ ಹಾರಿಸಿದ ಶ್ರೀ @shamanur19054 ಹಾಗೂ ಶ್ರೀ ಉಮೇಶ್ ಮೇಟಿ ಅವರಿಗೆ ಶುಭಾಶಯಗಳು. ನಿಮ್ಮ ನಾಯಕತ್ವದಲ್ಲಿ ಕ್ಷೇತ್ರಗಳು ಸಮೃದ್ಧಿಯಾಗಲಿ.
"ಪ್ರಜಾಪ್ರಭುತ್ವದ ಅಖಾಡದಲ್ಲಿ ಅಭಿವೃದ್ಧಿಗೆ ಬೆಂಬಲ ನೀಡಿದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯ ಮತದಾರ ಪ್ರಭುಗಳಿಗೆ ಧನ್ಯವಾದಗಳು.
#DavanagereByElectionresults #Bagalkotbyelectionresults #karnatakabyelectionresults2026
A golden voice that touched millions has fallen silent.
Asha Bhosle gifted Kannada audiences timeless melodies from “Savaalu Haaki” in Doorada Betta to the beautiful songs of Matte Mungaru.
Her music will continue to echo in our hearts.
Prayers for her family and fans.
#Ashabhosle
6
72
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು
ಅನುತ್ತೀರ್ಣರಾದ ವಿದ್ಯಾರ್ಥಿಗಳು ದೃತಿಗೆಡಬೇಡಿ. ಒಂದೆರಡು ಅಂಕಗಳು ನಿಮ್ಮ ಭವಿಷ್ಯವನ್ನು ನಿರ್ಧರಿಸಲಾರವು. ಮರಳಿ ಯತ್ನಿಸಿ, ಗೆಲುವು ನಿಮ್ಮದಾಗಲಿದೆ
#PUCResults2026
7
77
ವಿದ್ಯಾರ್ಥಿ ಸಮುದಾಯದ ಹಕ್ಕುಗಳ ರಕ್ಷಣೆ ಹಾಗೂ ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವವನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಸ್ಥಾಪಿಸಲಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ವಿದ್ಯಾರ್ಥಿ ಘಟಕ ಎನ್.ಎಸ್.ಯು.ಐ. ನ 56 ನೇ ಸಂಸ್ಥಾಪನಾ ದಿನದ ಹಾರ್ದಿಕ ಶುಭಾಶಯಗಳು.
#NSUIFoundationDay
9
84
ಮುತ್ಸದ್ದಿ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಕೀಳುಮಟ್ಟದ ಹೇಳಿಕೆ ನೀಡಿರುವುದು ಖಂಡನೀಯ, ಇದು ಕೇವಲ ಒಬ್ಬ ನಾಯಕರಿಗೆ ಮಾಡಿದ ಅವಮಾನವಲ್ಲ, ಇಡೀ ಶೋಷಿತ ಸಮುದಾಯಕ್ಕೆ ಮಾಡಿದ ಅವಮಾನ. ಕೂಡಲೇ ಅವರು ಬೇಷರತ್ ಕ್ಷಮೆಯಾಚಿಸಬೇಕು.
ಸಂವಿಧಾನದ ಆಶಯಗಳ ಮೇಲೆ ನಡೆಯುವ ದೇಶದಲ್ಲಿ, ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿ ಹಿರಿಯ ನಾಯಕರನ್ನು ಇಷ್ಟು ಕೀಳಾಗಿ ನಿಂದಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಬಿಜೆಪಿಯ ಮನುವಾದಿ ಚಿಂತನೆಯೇ @himantabiswa ಅವರ ನಾಲಿಗೆಯ ಮೂಲಕ ಹೊರಬರುತ್ತಿದೆ. ಸಂವಿಧಾನದ ಆಶಯಗಳನ್ನು ಗಾಳಿಗೆ ತೂರುವ ಇಂತಹ ಹೇಳಿಕೆಗಳಿಗೆ ಪ್ರಧಾನಿ @narendramodi ಯವರ ಮೌನವೇ ಬೆಂಬಲ.
ಮಲ್ಲಿಕಾರ್ಜುನ ಖರ್ಗೆಯವರನ್ನು ಹೀಯಾಳಿಸುವ ಮೂಲಕ ಬಿಜೆಪಿ ತನ್ನ ದಲಿತ ವಿರೋಧಿ ಮುಖವನ್ನು ಮತ್ತೆ ಪ್ರದರ್ಶಿಸಿದೆ. ಶೋಷಿತ ವರ್ಗಗಳು ಇದಕ್ಕೆ ತಕ್ಕ ಉತ್ತರ ನೀಡಲಿವೆ.






































